ADVERTISEMENT

ಬಾಂಧವಗಢ ಆನೆಗಳ ಸಾವು: ಎನ್‌ಜಿಟಿ ನೋಟಿಸ್‌

ಪಿಟಿಐ
Published 15 ನವೆಂಬರ್ 2024, 18:29 IST
Last Updated 15 ನವೆಂಬರ್ 2024, 18:29 IST
ಬೆಳ್ಳಂದೂರು ಕೆರೆ: ಮಾಹಿತಿಗೆ ಎನ್‌ಜಿಟಿ ಸೂಚನೆ
ಬೆಳ್ಳಂದೂರು ಕೆರೆ: ಮಾಹಿತಿಗೆ ಎನ್‌ಜಿಟಿ ಸೂಚನೆ   

ನವದೆಹಲಿ: ಮಧ್ಯಪ್ರದೇಶದ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ 10 ಆನೆಗಳ ನಿಗೂಢ ಸಾವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್‌ಜಿಟಿ) ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ಭಾರತೀಯ ವನ್ಯಜೀವಿ ಸಂಸ್ಥೆ ಮತ್ತು ಇತರರಿಗೆ ಪ್ರತಿಕ್ರಿಯಿಸಲು ನೋಟಿಸ್‌ ಜಾರಿಗೊಳಿಸಿದೆ.

ಆನೆಗಳ ಸಾವಿನ ಕುರಿತು ಮಾಧ್ಯಮಗಳ ವರದಿಯನ್ನು ಆಧರಿಸಿ ಎನ್‌ಜಿಟಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಮುಂದಿನ ವಿಚಾರಣೆ ಡಿಸೆಂಬರ್‌ 12ರಂದು ನಡೆಯಲಿದ್ದು, ಅದಕ್ಕೂ ಒಂದು ವಾರ ಮುನ್ನ ಪ್ರಮಾಣ ಪತ್ರದ ಮೂಲಕ ಪ್ರತಿಕ್ರಿಯೆ ಸಲ್ಲಿಸುವಂತೆ ಪೀಠ ಸೂಚಿಸಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT