ಢಾಕಾ: ‘ದಾರಿ ತಪ್ಪಿಸುವ ಇಲ್ಲವೇ ಸುಳ್ಳು ಸುದ್ದಿ’ಗಳನ್ನು ಪ್ರಕಟಿಸಿದಲ್ಲಿ ಅಥವಾ ಪ್ರಸಾರ ಮಾಡಿದಲ್ಲಿ, ಸಂಬಂಧಿಸಿದ ಮಾಧ್ಯಮ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಭಾನುವಾರ ಕಠಿಣ ಎಚ್ಚರಿಕೆ ನೀಡಿದೆ.
‘ಮಾಧ್ಯಮಗಳು ಸತ್ಯವನ್ನು ಎತ್ತಿ ಹಿಡಿಯದಿದ್ದರೆ ದೇಶ ಮುಗ್ಗರಿಸುತ್ತದೆ’ ಎಂದು ಗೃಹ ಸಚಿವಾಲಯದ ಸಲಹೆಗಾರ ಬ್ರಿಗೇಡಿಯರ್ ಜನರಲ್ (ನಿವೃತ್ತ) ಎಂ.ಸಖಾವತ್ ಹುಸೇನ್ ಹೇಳಿದರು.
ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಗಾಯಗೊಂಡು, ರಾಜರ್‌ಬಾಗ್ ಸೆಂಟ್ರಲ್ ಪೊಲೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸರ ಆರೋಗ್ಯ ವಿಚಾರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಇತ್ತೀಚೆಗೆ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಈ ಕ್ರಮದಲ್ಲಿ ಪಾತ್ರವಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಅಂಚೆ, ದೂರಸಂಪರ್ಕ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಲಹೆಗಾರ ನಹಿದ್ ಇಸ್ಲಾಂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.