ADVERTISEMENT

ಹಿಂದೂಗಳ ಮೇಲೆ ಬಾಂಗ್ಲಾ ಸೇನೆ ದಾಳಿ: ವಿಡಿಯೊ ಹಂಚಿಕೊಂಡ ಲೇಖಕಿ ತಸ್ಲೀಮಾ ನಸ್ರೀನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ನವೆಂಬರ್ 2024, 8:28 IST
Last Updated 6 ನವೆಂಬರ್ 2024, 8:28 IST
<div class="paragraphs"><p>ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಲಾಠಿ ಚಾರ್ಜ್ ನಡೆಸುತ್ತಿರುವ ಸೇನಾ ಸಿಬ್ಬಂದಿ</p></div>

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಲಾಠಿ ಚಾರ್ಜ್ ನಡೆಸುತ್ತಿರುವ ಸೇನಾ ಸಿಬ್ಬಂದಿ

   

Credit: X/@taslimanasreen

ನವದೆಹಲಿ: ಬಾಂಗ್ಲಾದೇಶದ ಚಿತ್ತಗಾಂಗ್‌ನ ಹಜಾರಿ ಲೇನ್‌ನಲ್ಲಿ ಹಿಂದೂಗಳ ಮೇಲೆ ಸೇನಾ ಸಿಬ್ಬಂದಿ ಮತ್ತು ಪೊಲೀಸರು ದಾಳಿ ನಡೆಸುತ್ತಿದ್ದಾರೆ ಎಂದು ಹೇಳಲಾದ ವಿಡಿಯೊವನ್ನು ಲೇಖಕಿ ತಸ್ಲೀಮಾ ನಸ್ರೀನ್ ಅವರು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ.

ಹಿಂದೂಗಳ ಮೇಲೆ ಸೇನಾ ಸಿಬ್ಬಂದಿ ಮತ್ತು ಪೊಲೀಸರು ಲಾಠಿ ಚಾರ್ಜ್ ನಡೆಸುತ್ತಿರುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿದೆ.

ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ದೇಶ ತೊರೆದು ಪಲಾಯನ ಮಾಡಿದ ನಂತರ ಹಿಂದೂಗಳ ಮೇಲಿನ ಹಿಂಸಾಚಾರ ಪ್ರಕರಣಗಳು ಹೆಚ್ಚಾಗಿವೆ.

ಬಾಂಗ್ಲಾದೇಶದ 170 ಮಿಲಿಯನ್ ಜನಸಂಖ್ಯೆಯ ಶೇಕಡ 8ರಷ್ಟಿರುವ ಹಿಂದೂಗಳು ಸಾಂಪ್ರದಾಯಿಕವಾಗಿ ಹಸೀನಾ ಅವರ ಅವಾಮಿ ಲೀಗ್ ಪಕ್ಷವನ್ನು ಬೆಂಬಲಿಸಿದ್ದಾರೆ. ಇದು ಕೆಲವು ತಿಂಗಳ ಹಿಂದೆ ನಡೆದ ಮೀಸಲಾತಿ ವಿರೋಧಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಹಿಂಸಾತ್ಮಕ ಘರ್ಷಣೆಯ ಬಳಿಕ ಹಿಂದೂಗಳ ಮೇಲೆ ದಾಳಿ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವಂತೆ ಮಾಡಿತ್ತು.

ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ಸಾವಿರಾರು ಹಿಂದೂಗಳು ಭಾರತಕ್ಕೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.