ರಾಂಚಿ: ಬಾಂಗ್ಲಾ ನುಸುಳುಕೋರರ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕಳವಳ ವ್ಯಕ್ತಪಡಿಸಿದ್ದಾರೆ. ನುಸುಳುಕೋರರಿಂದ ಜಾರ್ಖಂಡ್ ಬುಡಕಟ್ಟು ಜನಾಂಗದವರಿಗೆ ಅಪಾಯವಿದೆ. ವಿಶೇಷವಾಗಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಸುರಕ್ಷತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶರ್ಮಾ, ಬಾಂಗ್ಲಾದೇಶಿ ನುಸುಳುಕೋರರು ಸಾಮಾನ್ಯವಾಗಿ ಬುಡಕಟ್ಟು ಮಹಿಳೆಯರನ್ನು ಮದುವೆಯಾಗುವ ಮೂಲಕ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಾರೆ. ಜತೆಗೆ ಅವರ ಹಕ್ಕುಗಳ ಮೇಲೆ ಹಿಡಿತ ಸಾಧಿಸುತ್ತಾರೆ ಎಂದು ಆರೋಪಿಸಿದ್ದಾರೆ.
ಅಸ್ಸಾಂನಲ್ಲಿ ಇದನ್ನು ನಾನು ಪ್ರತ್ಯಕ್ಷವಾಗಿ ನೋಡಿದ್ದೇನೆ. ಅಲ್ಲಿನ ಜನಸಂಖ್ಯೆಯ ಶೇ 40ರಷ್ಟು ಮಂದಿ ಬಾಂಗ್ಲಾದೇಶಿ ನುಸುಳುಕೋರರಿದ್ದಾರೆ. ಈ ಪರಿಸ್ಥಿತಿಯು ಪಶ್ಚಿಮ ಬಂಗಾಳವನ್ನು ಪ್ರತಿಬಿಂಬಿಸುತ್ತದೆ. ನಮ್ಮ ಭವಿಷ್ಯದ ದೃಷ್ಟಿಯಿಂದ ಜಾರ್ಖಂಡ್‌ನಲ್ಲಿ ಈ ರೀತಿಯ ಸನ್ನಿವೇಶವನ್ನು ತಡೆಯುವುದು ಅನಿವಾರ್ಯ. ನಾವು ಇದರ ವಿರುದ್ಧ ಧ್ವನಿ ಎತ್ತಬೇಕಿದೆ. ರಾಜ್ಯದಲ್ಲಿ (ಜಾರ್ಖಂಡ್) ಬಲವಂತದ ಮತಾಂತರಗಳು ಮತ್ತು ಅದರ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಆಯ್ಕೆಮಾಡುವುದು ಅಗತ್ಯವಾಗಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.