ಕೊರ್ಬಾ: ಛತ್ತೀಸಗಢದ ಕೊರ್ಬಾ ಜಿಲ್ಲೆಯಲ್ಲಿ ಅತಿಯಾದ ಉಷ್ಣಾಂಶದ ಪರಿಣಾಮ ಕನಿಷ್ಠ 24 ಬಾವಲಿಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಪಾಲಿ ಅರಣ್ಯ ಪ್ರದೇಶದ ಪರ್ಸಾದ ಗ್ರಾಮದ ಬಳಿ ಬಾವಲಿಗಳ ಮೃತದೇಹಗಳು ದೊರಕಿವೆ. ಸಾವಿಗೆ ಕಾರಣ ಪತ್ತೆ ಮಾಡಲು ಮೃತದೇಹಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸ್ಥಳೀಯ ಅರಣ್ಯ ವಿಭಾಗೀಯ ಅಧಿಕಾರಿ ತಿಳಿಸಿದ್ದಾರೆ.
ಪ್ರಾಥಮಿಕ ವರದಿಯಲ್ಲಿ ಬಾವಲಿಗಳು ಬಿಸಿಗಾಳಿಯ ಪರಿಣಾಮ ಮೃತಪಟ್ಟಿವೆ ಎಂದು ಕಂಡುಬಂದಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.