ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ಪ್ರಸಾರ ಮಾಡಿದ ಸಾಕ್ಷ್ಯಚಿತ್ರದ ಸಮಯ ಆಕಸ್ಮಿಕವಾದುದಲ್ಲ, ಇದು ಇನ್ನೊಂದು ಬಗೆಯ ರಾಜಕಾರಣ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಂಗಳವಾರ ಅಭಿಪ್ರಾಯಪಟ್ಟರು.
ಪ್ರಧಾನಿಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಮತ್ತು ಸಿರಿವಂತ ಉದ್ಯಮಿ ಜಾರ್ಜ್ ಸೊರೊಸ್ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮೋದಿ ಅವರನ್ನು ವಿದೇಶಿ ಮಾಧ್ಯಮ ಚಿತ್ರಿಸಿರುವ ಬಗೆ
ಅತ್ಯಂತ ಖಂಡನೀಯ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.