ನವದೆಹಲಿ: ಬೆಳಗಾವಿಯಲ್ಲಿ ಮಹಿಳೆಯ ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ನಾಲ್ಕು ವಾರಗಳಲ್ಲಿ ವಿವರವಾದ ವರದಿ ಸಲ್ಲಿಸಬೇಕು ಎಂದು ಆಯೋಗ ಸೂಚಿಸಿದೆ. ಇದು ಎಫ್‌ಐಆರ್‌ನ ದಾಖಲಾತಿಯ ಸ್ಥಿತಿ, ತನಿಖೆಯ ಪ್ರಗತಿ, ಬಂಧನ, ಸಂತ್ರಸ್ತರಿಗೆ ಪರಿಹಾರ ನೀಡಿದ್ದರೆ ಆ ಬಗ್ಗೆ ವಿವರ ಹಾಗೂ ರಾಜ್ಯದಲ್ಲಿ ಅಂತಹ ಘಟನೆಗಳನ್ನು ತಡೆಗಟ್ಟಲು ತೆಗೆದುಕೊಂಡ ಅಥವಾ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಒಳಗೊಂಡಿರಬೇಕು ಎಂದು ಹೇಳಿದೆ.
ಆಯೋಗದ ಡಿಐಜಿ ಅವರು ತ್ವರಿತವಾಗಿ ಸತ್ಯಶೋಧನಾ ತಂಡ ರಚಿಸಿ ಘಟನಾ ಸ್ಥಳದಲ್ಲಿ ವಿಚಾರಣೆ ನಡೆಸಬೇಕು ಹಾಗೂ ಎರಡು ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದೂ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.