ADVERTISEMENT

ಕೋಲ್ಕತ್ತ ಬಾಲಕಿ ಅತ್ಯಾಚಾರ–ಕೊಲೆ ಪ್ರಕರಣ: SIT ರಚಿಸಿದ ಪಶ್ಚಿಮ ಬಂಗಾಳ ಸರ್ಕಾರ

ಪಿಟಿಐ
Published 9 ಅಕ್ಟೋಬರ್ 2024, 4:23 IST
Last Updated 9 ಅಕ್ಟೋಬರ್ 2024, 4:23 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಕೋಲ್ಕತ್ತ: ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ 10 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಬರುಯಿಪುರ ಪೊಲೀಸ್‌ ವರಿಷ್ಠಾಧಿಕಾರಿ ಪಲಾಶ್ ಚಂದ್ರ ಧಾಲಿ ನೇತೃತದಲ್ಲಿ ಎಸ್‌ಐಟಿ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ADVERTISEMENT

ಘಟನೆ ಸಂಬಂಧಿಸಿದಂತೆ ಅಪರಾಧಕ್ಕೆ ನಿಖರವಾದ ಕಾರಣ ತಿಳಿದುಕೊಳ್ಳಲು ಹಾಗೂ ನ್ಯಾಯವನ್ನು ಒದಗಿಸುವ ಉದ್ದೇಶ ಹೊಂದಿದ್ದೇವೆ. ಆರೋಪಿಗಳಿಗೆ ಶಿಕ್ಷೆ ವಿಧಿಸಲು ನಾವು ಬದ್ಧರಾಗಿದ್ದೇವೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡುಲು ಬಯಸುತ್ತೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಎನ್ನಲಾದ 10 ವರ್ಷದ ಹೆಣ್ಣು ಮಗುವಿನ ಮೃತದೇಹವನ್ನು ಪಶ್ಚಿಮ ಬಂಗಾಳದ ದಕ್ಷಿಣ ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿರುವ ಗ್ರಾಮಕ್ಕೆ ತಂದ ನಂತರ ರೊಚ್ಚಿಗೆದ್ದ ಸಾವಿರಾರು ಜನರು ರಸ್ತೆ ತಡೆ ಮತ್ತು ಪೊಲೀಸ್‌ ವಾಹನದ ಮೇಲೆ ದಾಳಿ ನಡೆಸಿದರು ಎಂದು ಪೊಲೀಸರು ಮಂಗಳವಾರ ತಿಳಿಸಿದರು.

ಅಕ್ಟೋಬರ್‌ 5ರಂದು ಟ್ಯೂಷನ್‌ಗೆ ತೆರಳಿ ಮನೆಗೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ನಾಲ್ಕನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ನಂತರ ಬಾಲಕಿಯ ಮೃತದೇಹವನ್ನು ಕಾಂತಪುಕೂರಿಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಬಳಿಕ ಕಲ್ಕತ್ತ ಹೈಕೋರ್ಟ್‌ ಆದೇಶದ ಅನುಸಾರ ಮೃತದೇಹವನ್ನು ನಾದಿಯಾ ಜಿಲ್ಲೆಯ ಜೆಎನ್‌ಎಂ ಆಸ್ಪತ್ರೆಗೆ ಕಳುಹಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.