ADVERTISEMENT

ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ: ರಾತ್ರಿ ಸಹಾಯಕರು ಯೋಜನೆ ಜಾರಿ

ಆರ್‌.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ

ಪಿಟಿಐ
Published 20 ಆಗಸ್ಟ್ 2024, 3:25 IST
Last Updated 20 ಆಗಸ್ಟ್ 2024, 3:25 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಕೋಲ್ಕತ್ತ: ಆರ್‌.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಬೆನ್ನಲ್ಲೇ ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರ ನೆರವಿಗೆ ಧಾವಿಸಿದೆ.

ಆರೋಗ್ಯ ಇಲಾಖೆಯಿಂದ Rattierer Saathi (ರಾತ್ರಿ ಸಹಾಯಕರು) ಎಂಬ ಕಾರ್ಯಕ್ರಮ ಜಾರಿಗೊಳಿಸಲಾಗಿದ್ದು ಆ ಪ್ರಕಾರ ಮೆಡಿಕಲ್ ಕಾಲೇಜುಗಳಲ್ಲಿ, ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ, ಮಹಿಳಾ ಹಾಸ್ಟೆಲ್‌ಗಳಿಗೆ ಅಗತ್ಯ ರಕ್ಷಣೆ ಒದಗಿಸಲಾಗುತ್ತದೆ.

ADVERTISEMENT

ಈ ಕಾರ್ಯಕ್ರಮದ ಅಡಿ ಪ್ರತ್ಯೇಕ ಶೌಚಾಲಯಗಳು, ವಿಶ್ರಾಂತಿ ಕೊಠಡಿಗಳು ಹಾಗೂ ಮಹಿಳಾ ಸ್ವಯಂಸೇವಕಿಯರ ನಿಯೋಜನೆ ಮಾಡಲಾಗುತ್ತದೆ. ಸಿಟಿಟಿವಿ ಇಲ್ಲದಿದ್ದರೇ ತಕ್ಷಣವೇ ಅಂತಹ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗುತ್ತದೆ.

ಇದಕ್ಕಾಗಿ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರ ಸುರಕ್ಷತೆಗಾಗಿ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲು ಅನುಕೂಲ ಕಲ್ಪಿಸಲಾಗುತ್ತದೆ ಎಂದು ತಿಳಿಸಿದೆ.

ಎಲ್ಲ ಮೆಡಿಕಲ್ ಕಾಲೇಜುಗಳಿಗೆ ಪೊಲೀಸ್ ಗಸ್ತು ಕಡ್ಡಾಯಗೊಳಿಸಲಾಗುತ್ತದೆ. ಗುರುತಿನ ಚೀಟಿ ತಪಾಸಣೆಯನ್ನೂ ಕಡ್ಡಾಯಗೊಳಿಸಲಾಗುತ್ತದೆ. ಖಾಸಗಿ ಸಂಸ್ಥೆಗಳು ಅನಗತ್ಯವಾಗಿ ಮಹಿಳೆಯರಿಗೆ ರಾತ್ರಿ ಪಾಳಿ ನೀಡುವುದನ್ನು ತಪ್ಪಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.