ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ಶಾಲೆ ಮತ್ತು ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಸುಜಯ್ ಕೃಷ್ಣ ಭದ್ರ ಎಂಬುವರನ್ನು ಜಾರಿ ನಿರ್ದೇಶನಾಲಯವು ಮಂಗಳವಾರ ರಾತ್ರಿ ಬಂಧಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾಲಿಘಾಟ್‌ನ ಅಂಕಲ್ ಎಂದೇ ಹೆಸರುವಾಸಿಯಾಗಿರುವ ಭದ್ರ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು 12 ತಾಸು ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದಾರೆ.
‘ವಿಚಾರಣೆ ವೇಳೆ ಅವರು ಸಹಕರಿಸಲಿಲ್ಲ’ ಎಂದು ಅಧಿಕಾರಿಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.