ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿನ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 9ರಂದು ವಿಚಾರಣೆಗೆ ಹಾಜರಾಗುವಂತೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದೆ.
ಬ್ಯಾನರ್ಜಿ ಪತ್ನಿ ರುಜಿರಾ ಅವರಿಗೂ ಅಕ್ಟೋಬರ್ 11ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ.
‘ಅ.9ರಂದು ಬ್ಯಾನರ್ಜಿ ಅವರನ್ನು ಮತ್ತು ಅ.11ರಂದು ರುಜಿರಾ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಇಬ್ಬರಿಗೂ ಇಲ್ಲಿನ ಸಿಜಿಒ ಕಾಂಪ್ಲೆಕ್ಸ್‌ನಲ್ಲಿರುವ ಕಚೇರಿಗೆ ಬರಲು ತಿಳಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಅಭಿಷೇಕ್ ಬ್ಯಾನರ್ಜಿ ಪೋಷಕರಾದ ಅಮಿತ್ ಮತ್ತು ಲತಾ ಬ್ಯಾನರ್ಜಿ ಅವರಿಗೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರ ವಿಚಾರಣೆ ಹಾಜರಾಗಲು ತಿಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.