ಕೋಲ್ಕತ್ತ (ಪಿಟಿಐ): ಭಾರತದಿಂದ ಬಾಂಗ್ಲಾದೇಶಕ್ಕೆ ನುಸುಳಲು ಯತ್ನಿಸುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪ ಸಂಬಂಧ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಇಬ್ಬರು ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಬಿಎಸ್‌ಎಫ್‌ನ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಬಂಧಿತರು. ಸದ್ಯ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
‘ಆಗಸ್ಟ್ 26ರಂದುಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಮೀಪ ಬಾಂಗ್ಲಾದೇಶಕ್ಕೆ ಅಕ್ರಮವಾಗಿ ನುಸುಳಲು ಯತ್ನಿಸಿದ ಮಹಿಳೆಯನ್ನು ಬಿಎಸ್‌ಎಫ್‌ನ ಕಾನ್‌ಸ್ಟೆಬಲ್‌ವೊಬ್ಬರು ಎಳೆದೊಯ್ದು ಅತ್ಯಾಚಾರ ಎಸಗಿದ್ದರು. ಕೃತ್ಯಕ್ಕೆ ಎಎಸ್‌ಐ ಸಹಕರಿಸಿದ್ದರು. ಈ ಬಗ್ಗೆ ಮಹಿಳೆ ದೂರು ನೀಡಿದ ನಂತರ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಗಳನ್ನು ಕೆಲಸದಿಂದ ಅಮಾನತು ಮಾಡಿ, ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಸದ್ಯ ಪ್ರಕರಣವು ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.