ಕೋಟಾ: ರಾಜಸ್ಥಾನದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಕೋಟಾದಲ್ಲಿ ಪಶ್ಚಿಮ ಬಂಗಾಳದ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಈ ವರ್ಷದ 25ನೇ ಆತ್ಮಹತ್ಯೆ ಪ್ರಕರಣವಾಗಿದೆ.
ವಿದ್ಯಾರ್ಥಿಯನ್ನು ಫೋರಿದ್ ಎಂದು ಗುರುತಿಸಲಾಗಿದ್ದು, ಇವರು ಕಳೆದ ಒಂದು ವರ್ಷದಿಂದ ಕೋಟಾದಲ್ಲಿ ನೀಟ್ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದರು.
ನಿನ್ನೆ(ಸೋಮವಾರ) ಸಂಜೆ ಫೋರಿದ್ ಪಿಜಿಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅಷ್ಟರಲ್ಲಿ ಮೃತಪಟ್ಟಿದ್ದರು.
ಫೋರಿದ್ ಉಳಿದುಕೊಂಡಿದ್ದ ಪಿಜಿಯಲ್ಲಿ ವಾಸಿಸುವ ಇತರ ವಿದ್ಯಾರ್ಥಿಗಳು, ಅವರನ್ನು ಸಂಜೆ 4 ಗಂಟೆಗೆ ಕೊನೆಯದಾಗಿ ನೋಡಿದ್ದೇವೆ ಸಂಜೆ 7 ಗಂಟೆಯವರೆಗೂ ತನ್ನ ಕೋಣೆಯಿಂದ ಹೊರಬರದೆ, ಫೋನ್ ಕರೆಗಳಿಗೂ ಉತ್ತರಿಸದಿದ್ದಾಗ, ಪಿಜಿ ಮಾಲೀಕರಿಗೆ ತಿಳಿಸಿದ್ದಾರೆ. ಬಳಿಕ ನಮಗೆ ಮಾಹಿತಿ ದೊರಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾವುದೇ ಡೆತ್ ನೋಟ್‌ಗಳು ದೊರಕಿಲ್ಲ. ಅವರ ಕುಟುಂಬಕ್ಕೆ ತಿಳಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.