ಅಮೃತಸರ: ‘ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆತಮ್ಮನ್ನು ಆಹ್ವಾನಿಸಿದ ನೂತನ ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿತಿಳಿಸಿದ್ದಾರೆ.
‘ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾನುಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ’ ಎಂದು ತಿವಾರಿ ಟ್ವೀಟ್ ಮಾಡಿದ್ದಾರೆ.
ಟ್ವೀಟ್‌ನಲ್ಲಿ ಏನಿದೆ?
ಮಾನ್ ಅವರ ಆಹ್ವಾನ ಪತ್ರಿಕೆಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ತಿವಾರಿ, ‘ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಭಗವಂತ ಮಾನ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದರು. ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾನು ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ. ಚರಣ್‌ಜಿತ್ ಸಿಂಗ್ ಚನ್ನಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ. ಆದರೂ ಅವರು ನಮ್ಮ ಶಾಸಕರಲ್ಲಿ ಒಬ್ಬರಾಗಿದ್ದರು’ ಎಂದಿದ್ದಾರೆ.
2021ರ ಸೆ. 20 ರಂದು ಚನ್ನಿ ಪಂಜಾಬ್ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದರು. ಮನೀಶ್ ತಿವಾರಿ ಮಾಡಿರುವ ಟ್ವೀಟ್ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿಯ 92 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಹುಮತದ ಸರ್ಕಾರ ರಚಿಸುತ್ತಿದೆ.
ಭಗವಂತ ಮಾನ್ ಅವರು ಇಂದು (ಮಾ.16) ಪಂಜಾಬ್‌ನ 17ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.