ನವದೆಹಲಿ: ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ಒಮನ್ ದೇಶವು ಅನುಮೋದಿತ ಕೋವಿಡ್ 19ರ ಲಸಿಕೆಗಳ ಪಟ್ಟಿಗೆ ಸೇರಿಸಿದೆ. ಕೋವಾಕ್ಸಿನ್‌ನ ಎರಡೂ ಡೋಸ್ ಲಸಿಕೆ ಪಡೆದ ಪ್ರಯಾಣಿಕರು ಒಮನ್‌ನಲ್ಲಿ ಕ್ವಾರಂಟೈನ್‌ಗೆ ಒಳಗಾಗುವ ಅಗತ್ಯ ಇನ್ನು ಇರುವುದಿಲ್ಲ.
ಈ ಸಂಬಂಧ ಮಸ್ಕತ್‌ನ ಭಾರತೀಯ ರಾಯಭಾರ ಕಚೇರಿ ಪ್ರಕಟಣೆ ಹೊರಡಿಸಿದೆ. ಪ್ರಯಾಣಕ್ಕೂ 14 ದಿನ ಮುನ್ನ ಎರಡೂ ಡೋಸ್ ಕೋವಾಕ್ಸಿನ್ ಲಸಿಕೆ ಪಡೆದಿರುವ ಭಾರತೀಯರಿಗೆ ಇದು ಅನುಕೂಲವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಉಳಿದಂತೆ ಎಲ್ಲ ಬಗೆಯ ಕೋವಿಡ್ ಸಂಬಂಧಿ ಷರತ್ತುಗಳು ಮುಂದುವರಿಯುತ್ತವೆ. ಪ್ರಯಾಣಿಕರು ಆಗಮನಕ್ಕೂ ಮುನ್ನ ಆರ್‌ಟಿಪಿಸಿಆರ್ ಪರೀಕ್ಷಾ ವರದಿ ತರಬೇಕು ಎಂದು ಪ್ರಕಟಣೆ ಹೇಳಿದೆ.
ಅಸ್ಟ್ರಾಜೆನಿಕಾ/ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡ ಪ್ರಯಾಣಿಕರಿಗೆ ಕ್ವಾರಂಟೈನ್ ಇಲ್ಲದೆ ಒಮನ್‌ಗೆ ಪ್ರಯಾಣಿಸಲು ಈಗಾಗಲೇ ಅನುಮತಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.