ADVERTISEMENT

ಮೊದಲು ಪಕ್ಷದ ನಾಯಕರಿಗೆ ನ್ಯಾಯ ಒದಗಿಸಿ: ರಾಹುಲ್‌‌ಗೆ ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಜನವರಿ 2024, 7:34 IST
Last Updated 14 ಜನವರಿ 2024, 7:34 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

ಪಿಟಿಐ ಚಿತ್ರ

ಮುಂಬೈ: ಮಾಜಿ ಸಂಸದ ಮಿಲಿಂದ್ ದಿಯೋರಾ, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಇದನ್ನೇ ಗುರಿಯಾಗಿಸಿಕೊಂಡು ಇಂದು ಮಣಿಪುರದಿಂದ 'ಭಾರತ್ ಜೋಡೊ ನ್ಯಾಯ ಯಾತ್ರೆ' ಆರಂಭಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ADVERTISEMENT

'ಮೊದಲು ಪಕ್ಷದ ನಾಯಕರಿಗೆ ನ್ಯಾಯ ಒದಗಿಸಿ, ಬಳಿಕ ನ್ಯಾಯ ಯಾತ್ರೆ ಕೈಗೊಳ್ಳಿ' ಎಂದು ಬಿಜೆಪಿ ಐಟಿ ಸೆಲ್‌ ಉಸ್ತುವಾರಿ ಅಮಿತ್‌ ಮಾಳವೀಯ ಟೀಕಿಸಿದ್ದಾರೆ.

ಮಣಿಪುರದಲ್ಲಿ ಇಂದು ಭಾರತ್ ಜೋಡೊ ನ್ಯಾಯ ಯಾತ್ರೆ ಆರಂಭಿಸುವ ಹೊತ್ತಿನಲ್ಲೇ ಮಹಾರಾಷ್ಟ್ರ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಉಲ್ಬಣಗೊಂಡಿದೆ.

ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಜೊತೆ ಮುನಿಸಿಕೊಂಡಿದ್ದ ಮಿಲಿಂದ್ ದಿಯೋರಾ, ಕಾಂಗ್ರೆಸ್ ಪಕ್ಷ ತೊರೆದಿದ್ದಾರೆ.

ಮಾಜಿ ಸಂಸದ ಮಿಲಿಂದ್ ಅವರು ಏಕನಾಥ ಶಿಂದೆ ನೇತೃತ್ವದ ಶಿವಸೇನಾಗೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.