ADVERTISEMENT

ಲೋಕಸಭೆಯ ಹಂಗಾಮಿ ಸ್ಪೀಕರ್‌ ಆಗಿ ಭರ್ತೃಹರಿ ಮಹ್ತಬ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2024, 23:30 IST
Last Updated 20 ಜೂನ್ 2024, 23:30 IST
ಲೋಕಸಭೆ ಕಲಾಪ
ಲೋಕಸಭೆ ಕಲಾಪ   

ನವದೆಹಲಿ: ಲೋಕಸಭೆಯ ಹಂಗಾಮಿ ಸಭಾಧ್ಯಕ್ಷರನ್ನಾಗಿ ಏಳು ಬಾರಿಯ ಸಂಸದ, ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದ ಬಿಜೆಡಿ ನಾಯಕ ಭರ್ತೃಹರಿ ಮಹ್ತಬ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಆ ಮೂಲಕ ಲೋಕಸಭೆಯ ಅತ್ಯಂತ ಹಿರಿಯ ಸದಸ್ಯರನ್ನು ನೇಮಕ ಮಾಡುವ ಸಂಪ್ರದಾಯವನ್ನು ಮುರಿಯಲಾಗಿದೆ. ಕಾಂಗ್ರೆಸ್‌ನ ಕೋಡಿಕ್ಕುನ್ನಿಲ್‌ ಸುರೇಶ್‌ ಅವರು ಸದನದ ಅತ್ಯಂತ ಹಿರಿಯ ಸದಸ್ಯರಾಗಿದ್ದಾರೆ.  

ಇದೇ 24ರಂದು ಆರಂಭವಾಗಲಿರುವ ಅಧಿವೇಶನದಲ್ಲಿ ಸಂಸದರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಹಂಗಾಮಿ ಸ್ಪೀಕರ್‌ ಅಬರಿಗೆ ನೆರವಾಗಲು ಎಂಟು ಬಾರಿಯ ಸಂಸದ ಸುರೇಶ್‌ ಅವರೊಂದಿಗೆ ಡಿಎಂಕೆಯ ಟಿ.ಆರ್‌.ಬಾಲು, ಬಿಜೆಪಿಯ ರಾಧಾ ಮೋಹನ್‌ ಸಿಂಗ್‌ ಮತ್ತು ಫಗ್ಗಾನ್‌ ಸಿಂಗ್‌ ಕುಲಸ್ತೆ ಮತ್ತು ಟಿಎಂಸಿಯ ತೃಣಮೂಲ ಕಾಂಗ್ರೆಸ್‌ನ ಸುದೀಪ್‌ ಬಂಡೋ‍ಪಾಧ್ಯಾಯ ಅವರನ್ನು ಆಯ್ಕೆ ಮಾಡಲಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.