ADVERTISEMENT

ಸಂಗೀತ ಮಾಂತ್ರಿಕ ಇಳಯರಾಜಾ ‍ಪುತ್ರಿ ಭವತಾರಿಣಿ ನಿಧನ

​ಪ್ರಜಾವಾಣಿ ವಾರ್ತೆ
Published 25 ಜನವರಿ 2024, 19:34 IST
Last Updated 25 ಜನವರಿ 2024, 19:34 IST
<div class="paragraphs"><p>ಭವತಾರಿಣಿ</p></div>

ಭವತಾರಿಣಿ

   

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಹಿನ್ನೆಲೆ ಗಾಯಕಿ ಭವತಾರಿಣಿ (47) ಅನಾರೋಗ್ಯದಿಂದ ಶ್ರೀಲಂಕಾದಲ್ಲಿ ಗುರುವಾರ ನಿಧನರಾದರು. ಭವತಾರಿಣಿ, ಸಂಗೀತ ಮಾಂತ್ರಿಕ ಇಳಯರಾಜಾ ಅವರ ಪುತ್ರಿ. 

ಅವರಿಗೆ ಪತಿ, ಉದ್ಯಮಿ ಆರ್‌.ಶಬರಿರಾಜಾ ಇದ್ದಾರೆ. ಸಂಗೀತ ನಿರ್ದೇಶಕರಾದ ಯುವನ್ ಶಂಕರ್ ರಾಜಾ ಮತ್ತು ಕಾರ್ತಿಕ್ ರಾಜಾ ಅವರು ಭವತಾರಿಣಿಯ ಸಹೋದರರು. 

ADVERTISEMENT

ಅವರು ತಮಿಳು ಮಾತ್ರವಲ್ಲದೆ ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲೂ ಹಲವು ಗೀತೆಗಳನ್ನು ಹಾಡಿದ್ದಾರೆ. ಕ್ಯಾನ್ಸರ್‌ಗೆ ತುತ್ತಾಗಿದ್ದ ಭವತಾರಿಣಿ, ಕಳೆದ ಕೆಲವು ತಿಂಗಳುಗಳಿಂದ ಶ್ರೀಲಂಕಾದಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೂಲಗಳು ಹೇಳಿವೆ.

‘ತಮಿಳು ರಾಷ್ಟ್ರಕವಿ ಸುಬ್ರಹ್ಮಣ್ಯ ಭಾರತಿ ಅವರ ಜೀವನ ಆಧರಿಸಿದ ‘ಭಾರತಿ‘ ಚಿತ್ರದಲ್ಲಿನ ಗಾಯನಕ್ಕಾಗಿ ಭವತಾರಿಣಿ ರಾಷ್ಟ್ರಪ್ರಶಸ್ತಿ ಪಡೆದಿದ್ದರು. ಅವರ ಸಾವು ತುಂಬಲಾರದ ನಷ್ಟವಾಗಿದೆ‘ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.