ADVERTISEMENT

ಸತತ 2ನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಇಂದು ಪ್ರಮಾಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಡಿಸೆಂಬರ್ 2022, 2:05 IST
Last Updated 12 ಡಿಸೆಂಬರ್ 2022, 2:05 IST
ಭೂಪೇಂದ್ರ ಪಟೇಲ್ (ಪಿಟಿಐ ಚಿತ್ರ)
ಭೂಪೇಂದ್ರ ಪಟೇಲ್ (ಪಿಟಿಐ ಚಿತ್ರ)   

ಅಹಮದಾಬಾದ್: ಜಿಲ್ಲೆಯ ಘಟ್ಲೋಡಿಯಾ ಕ್ಷೇತ್ರದಿಂದ 1.92 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿರುವಭೂಪೇಂದ್ರ ಪಟೇಲ್ ಅವರು,ಗುಜರಾತ್ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಅವರಿಗೆ ಗಾಂಧಿನಗರದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್‌ ಪ್ರಮಾಣವಚನ ಬೋಧಿಸಲಿದ್ದಾರೆ.

ಪಟೇಲ್‌ ಅವರೊಂದಿಗೆ 20 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತು ಬಿಜೆಪಿ ಅಧಿಕಾರದಲ್ಲಿರುವ ಉಳಿದ ರಾಜ್ಯಗಳ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

182 ಸದಸ್ಯ ಬಲದಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿದೆ.156 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಸತತ 7ನೇ ಅವಧಿಗೆ ಅಧಿಕಾರಕ್ಕೇರಿದೆ. ಹೊಸ ಸರ್ಕಾರ ರಚನೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ 60 ವರ್ಷದ ಭೂಪೇಂದ್ರ ಪಟೇಲ್, ಶುಕ್ರವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮರುದಿನ (ಶನಿವಾರ)ಶನಿವಾರ ಅಹಮದಾಬಾದ್‌ನ ಬಿಜೆಪಿ ಕಚೇರಿ ‘ಕಮಲಂ’ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಟೇಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಹೀಗಾಗಿ ಸಿಎಂ ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಲಾಗಿದೆ ಬಿಜೆಪಿ ಪ್ರಕಟಿಸಿತ್ತು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಿಜಯ್ ರೂಪಾನಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಭೂಪೇಂದ್ರ ಪಟೇಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.