ಪಟ್ನಾ: ರಾಜ್ಯದ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿರುವ ಒಟ್ಟು 1.78 ಲಕ್ಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಗೆ ಬಿಹಾರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ.
85,477 ಪ್ರಾಥಮಿಕ ಶಿಕ್ಷಕರು, 1,745 ಮಾಧ್ಯಮಿಕ ಮತ್ತು 90,804 ಪ್ರೌಢಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅಂಗೀಕರಿಸಿದರು.
ಈ ನೇಮಕಾತಿ ಪ್ರಕ್ರಿಯೆಯು ಬಿಹಾರ ಲೋಕ ಸೇವಾ ಆಯೋಗದಿಂದ (ಬಿಪಿಎಸ್‌ಸಿ) ನಡೆಯಲಿದ್ದು, ಈ ವರ್ಷದ ಅಂತ್ಯದೊಳಗೆ ನೇಮಕಾತಿ ಪೂರ್ಣಗೊಳ್ಳಲಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಸಿದ್ಧಾರ್ಥ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.