ನವದೆಹಲಿ: ಜಾತಿ ಸಮೀಕ್ಷೆಯಲ್ಲಿ ಇರುವ ಜಾತಿವಾರು ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಬಿಹಾರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ. ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಿದಾಗ, ಅದರ ಬಗ್ಗೆ ತಕರಾರುಗಳು ಇದ್ದವರು ಅದನ್ನು ಪ್ರಶ್ನಿಸಲು ಸಾಧ್ಯವಾಗುತ್ತದೆ ಎಂದು ಕೋರ್ಟ್ ಹೇಳಿದೆ.
ಜಾತಿ ಸಮೀಕ್ಷೆಯನ್ನು ಹಾಗೂ ಜಾತಿ ಸಮೀಕ್ಷೆ ನಡೆಸುವ ಬಿಹಾರ ಸರ್ಕಾರದ ತೀರ್ಮಾನವನ್ನು ಎತ್ತಿಹಿಡಿದ ಪಟ್ನಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿಗಳನ್ನು ಸಲ್ಲಿಸಲಾಗಿದೆ. ಇವುಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತ ಅವರಿದ್ದ ವಿಭಾಗೀಯ ಪೀಠವು ನಡೆಸಿತು.
ಜಾತಿ ಸಮೀಕ್ಷೆಗೆ ಸಂಬಂಧಿಸಿದಂತೆ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲು ಬಿಹಾರ ಸರ್ಕಾರಕ್ಕೆ ಸೂಚಿಸಿರುವ ನ್ಯಾಯಪೀಠವು, ವಿಚಾರಣೆಯನ್ನು ಫೆಬ್ರುವರಿ 5ಕ್ಕೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.