ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೆಡಿಯು ಶಾಸಕರ ಸಭೆ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ನಿತೀಶ್ ಕುಮಾರ್ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ ನಡೆಸುತ್ತಿದ್ದು, ಅಲ್ಲಿಯೇ ನಿರ್ಧಾರ ಘೋಷಣೆ ಮಾಡುವ ಸಾಧ್ಯತೆ ಇದೆ.
ಸಭೆಯ ನಂತರ ಅವರು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆಯಿದೆ. ನಂತರ ಅವರು ಬಿಜೆಪಿ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ, ಪಟ್ನಾದ ಪಕ್ಷದ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ.
ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ನಿತ್ಯಾನಂದ ರಾಯ್ ಅವರು ಪಟ್ನಾದ ಪಕ್ಷದ ಕಚೇರಿಗೆ ಆಗಮಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ಸಂಸದ ರವಿಶಂಕರ್ ಪ್ರಸಾದ್ ಕೂಡ ಸಭೆಗೆ ಆಗಮಿಸಿದ್ದಾರೆ.
ಪಕ್ಷದ ಕಚೇರಿಗೆ ಆಗಮಿಸಿದ ಬಿಜೆಪಿ ಮುಖಂಡರು ಮುಂಬರುವ ಲೋಕಸಭೆ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.