ಪಾಟ್ನ: 2014ರ ಅಪಹರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದಲ್ಲಿ ಆರ್‌ಜೆಡಿ ಎಂಎಲ್‌ಸಿ ಕಾರ್ತಿಕ್ ಕುಮಾರ್ ಅವರು ಕಾನೂನು ಸಚಿವರಾಗಿದ್ದರು. ಆದರೆ ಕಬ್ಬು ಉದ್ಯಮ ಸಚಿವರಾಗಿ ಖಾತೆ ಬದಲಾಯಿಸಿದ್ದ ಕೆಲವೇ ಗಂಟೆಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಅಧ್ಯಕ್ಷ ಸ್ಥಾನ: ಪಾರದರ್ಶಕ ಚುನಾವಣೆಗೆ ತಿವಾರಿ, ತರೂರ್ ಆಗ್ರಹ
ಸಚಿವರ ರಾಜೀನಾಮೆ ಪತ್ರವನ್ನು ಬಿಹಾರ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕಂದಾಯ ಸಚಿವ ಅಲೋಕ್ ಕುಮಾರ್ ಮೆಹ್ತಾ ಅವರಿಗೆ ಕಬ್ಬು ಉದ್ಯಮ ಸಚಿವಾಲಯದ ಹೆಚ್ಚುವರಿ ಹೊಣೆ ವಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.