ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಜಾರ್ಖಂಡ್ ರಾಜ್ಯದ ದಿಯೋಘರ್ ಜಿಲ್ಲೆಯಲ್ಲಿ 6 ಜನ ಶಂಕಿತರನ್ನು ಬಂಧಿಸಿದ್ದಾರೆ.
ಏಮ್ಸ್ ಆಸ್ಪತ್ರೆಯ ಹತ್ತಿರದಲ್ಲಿ ಬಂಧಿತ ಆರೋಪಿಗಳು ಗೆಳೆಯನ ಮನೆಯಲ್ಲಿ ವಾಸವಾಗಿದ್ದರು. ಇವರನ್ನು ಪಟ್ನಾಕ್ಕೆ ತರತಂದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿ ರಿತ್ವಿಕ್ ಶ್ರೀವಾಸ್ತವ ಹೇಳಿದ್ದಾರೆ.
ಬಂಧಿತರನ್ನು ಬಿಹಾರದ ನಳಂದ ಜಿಲ್ಲೆಯ ನಿವಾಸಿಗಳಾದ ಪರಮ್‌ಜಿತ್ ಸಿಂಗ್ ಅಲಿಯಾಸ್ ಬಿಟ್ಟು, ಚಿಂಟು ಅಲಿಯಾಸ್ ಬಲ್ದೇವ್ ಕುಮಾರ್, ಪ್ರಶಾಂತ್ ಕುಮಾರ್, ಅಜಿತ್ ಕುಮಾರ್, ರಾಜೀವ್ ಕುಮಾರ್ ಮತ್ತು ಪಾಕು ಕುಮಾರ್ ಎಂದು ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಹಗರಣದ ಬಗ್ಗೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು ತನಿಖೆಗೆ ಆಗ್ರಹ ಮಾಡಿವೆ. ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿವೆ.
ಮೇ 5ರಂದು ನಡೆದ ಪರೀಕ್ಷೆಯಲ್ಲಿ ಸುಮಾರು 24 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಜೂನ್ 4ರಂದು ಪಲಿತಾಂಶ ಪ್ರಕಟಿಸಲಾಗಿತ್ತು. ನಂತರದ ದಿನಗಳಲ್ಲಿ ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪರೀಕ್ಷೆ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಆರೋಪಗಳು ಕೇಳಿಬಂದಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.