ಪಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿಜೀತನ್ ರಾಮ್ ಮಾಂಝಿ ನೇತೃತ್ವದ ಎಚ್‌ಎಎಂ(ಎಸ್) ಪಕ್ಷವುಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಎನ್‌ಡಿಎ ಒಕ್ಕೂಟದಲ್ಲಿ ಸೇರ್ಪಡೆಯಾಗಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಪಕ್ಷದ ಮುಖಂಡ ಮಾಂಝಿ ಅವರು ಗುರುವಾರ ಈ ವಿಷಯವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ವಕ್ತಾರ ಡ್ಯಾನಿಷ್ ರಿಜ್ವಾನ್ ಹೇಳಿದ್ದಾರೆ. ಬಿಹಾರದಲ್ಲಿ ಅಕ್ಟೋಬರ್– ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಪಕ್ಷವು ಬೆಂಬಲಿಸಿದೆ ಎಂದು ಪಕ್ಷದ ಮುಖಂಡ ಮಾಂಝಿ ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.