ADVERTISEMENT

ಬಿಹಾರದಲ್ಲಿ ಆರ್‌ಜೆಡಿ ನಾಯಕನ ಮೇಲೆ ಗುಂಡಿನ ದಾಳಿ: ಸ್ಥಿತಿ ಗಂಭೀರ

ಪಿಟಿಐ
Published 3 ಅಕ್ಟೋಬರ್ 2024, 5:27 IST
Last Updated 3 ಅಕ್ಟೋಬರ್ 2024, 5:27 IST
<div class="paragraphs"><p>ಚಿಕಿತ್ಸೆ ಪಡೆಯುತ್ತಿರುವ&nbsp;ಆರ್‌ಜೆಡಿ ನಾಯಕ ಪಂಕಜ್‌</p></div>

ಚಿಕಿತ್ಸೆ ಪಡೆಯುತ್ತಿರುವ ಆರ್‌ಜೆಡಿ ನಾಯಕ ಪಂಕಜ್‌

   

ಪಟ್ನಾ: ಬಿಹಾರದ ಆರ್‌ಜೆಡಿ ಮುಖಂಡ ಪಂಕಜ್ ಯಾದವ್ ಮೇಲೆ ದುಷ್ಕರ್ಮಿಗಳು ಗುರುವಾರ ಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದು ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಳಗ್ಗೆ ತಮ್ಮ ನಿವಾಸದ ಸಮೀಪ ವಾಯುವಿಹಾರ ಮಾಡುತ್ತಿದ್ದಾಗ ಈ ದಾಳಿ ನಡೆದಿದೆ. 

ADVERTISEMENT

ಪಂಕಜ್‌ ಯಾದವ್‌ ಅವರ ಎದೆ ಹಾಗೂ ಹೊಟ್ಟೆಯ ಭಾಗಕ್ಕೆ ಗುಂಡುಗಳು ತಗುಲಿವೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಪಂಕಜ್‌ ಮೇಲೆ ಗುಂಡು ಹಾರಿಸಿದವರು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಪಂಕಜ್‌ ಯಾದವ್‌ ಬಿಹಾರ ಆರ್‌ಜೆಡಿಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.