ಪಟ್ನಾ: ಬಿಹಾರದ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಸಭೆಯೊಂದರಲ್ಲಿ ತಮ್ಮ ಅಧೀನದ ಅಧಿಕಾರಿಗಳಿಗೆ ಹಾಗೂ ಜನಸಾಮಾನ್ಯರ ಬಗ್ಗೆ ಬಾಯಿಗೆ ಬಂದಹಾಗೇ ಬೈದು ಟೀಕೆಗೆ ಗುರಿಯಾಗಿದ್ದಾರೆ.
ಈ ಕುರಿತ ವಿಡಿಯೊ ಸಾಮಾಜಿಕ ತಾಣಗಳಲ್ಲಿ ಹೆಚ್ಚು ಹರಿದಾಡುತ್ತಿದೆ.
ಸಂಚಾರ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಸಭೆ ಆಯೋಜಿಸಿದ್ದ ಬಿಹಾರ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಕೆಕೆ ಪಾಠಕ್ ಅವರು ಸಭೆಯಲ್ಲಿ ತಾಳ್ಮೆ ಕಳೆದುಕೊಂಡು ಕೆಟ್ಟ ಭಾಷೆಯಲ್ಲಿ ಅಧಿಕಾರಿಗಳನ್ನು ಹಾಗೂ ಜನರನ್ನು ನಿಂದಿಸಿದ್ದಾರೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಹಾರ ಆಡಳಿತ ಸೇವೆ ಸಂಘದ ಪ್ರಧಾನ ಕಾರ್ಯದರ್ಶಿ ಸುನೀಲ್ ತಿವಾರಿ, ಕೆ.ಕೆ ಪಾಠಕ್ ಹುಚ್ಚರ ರೀತಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಸೆಕ್ರೆಟೆರಿಯಟ್ ಪೊಲೀಸ್ ಠಾಣೆಯಲ್ಲಿ ಪಾಠಕ್ ವಿರುದ್ಧ ದೂರು ದಾಖಲು ಮಾಡಿರುವುದಾಗಿ ಇಂಡಿಯಾ ಟಿವಿ ನ್ಯೂಸ್ ವೆಬ್‌ಸೈಟ್ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.