ನವದೆಹಲಿ: 11 ಮಂದಿ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸಂತ್ರಸ್ತೆ ಬಿಲ್ಕಿಸ್ ಬಾನು ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
1992ರ ಕ್ಷಮಾಪಣಾ ನೀತಿ ಅನ್ವಯಕ್ಕೆ ಅನುವುಮಾಡಿಕೊಟ್ಟ ಮೇ ತಿಂಗಳ ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸಿ ಅವರು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ ಎಂದು ಎಎನ್‌ಐ ಟ್ವೀಟಿಸಿದೆ.
2002 ಗೋಧ್ರಾ ಗಲಭೆ ಸಂದರ್ಭ ಬಿಲ್ಕಿಸ್ ಬಾನು ಅವರ ಕುಟುಂಬ ಸದಸ್ಯರನ್ನು ಕೊಂದು, ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು.
ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಆಗಸ್ಟ್ 15ರಂದು ಗುಜರಾತ್‌ನ ಗೋದ್ರಾ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರದ ಕ್ಷಮಾಪಣೆ ನೀತಿ ಅನ್ವಯ ಈ ಕ್ರಮ ಕೈಗೊಳ್ಳಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.