ADVERTISEMENT

ಅಧಿವೇಶನ | ಚು. ಆಯುಕ್ತರ ನೇಮಕ ಸಮಿತಿಯಿಂದ CJI ಹೊರಗಿಡುವ ಮಸೂದೆ ಮಂಡನೆ ಅನುಮಾನ

ಪಿಟಿಐ
Published 18 ಸೆಪ್ಟೆಂಬರ್ 2023, 16:37 IST
Last Updated 18 ಸೆಪ್ಟೆಂಬರ್ 2023, 16:37 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

-ಪಿಟಿಐ ಚಿತ್ರ

ನವದೆಹಲಿ: ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಡುವ ಮಸೂದೆಯನ್ನು ಸದ್ಯ ನಡೆಯುತ್ತಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸುವ ಸಾಧ್ಯತೆಗಳು ಇಲ್ಲ ಎಂದು ಮೂಲಗಳು ತಿಳಿಸಿವೆ.

ADVERTISEMENT

ವಿರೋಧ ಪಕ್ಷಗಳು ಹಾಗೂ ಮಾಜಿ ಮುಖ್ಯ ಚುನಾವಣಾ ಆಯುಕ್ತರಿಂದ ವಿರೋಧ ಬಂದಿರುವ ಕಾರಣ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಗೊತ್ತಾಗಿದೆ.

ಅಲ್ಲದೆ ಈ ಮಸೂದೆಯನ್ನು ಕಾನೂನು ಹಾಗೂ ನ್ಯಾಯ ಆಯ್ಕೆ ಸಮಿತಿಗೆ ವಹಿಸಬೇಕು ಎನ್ನುವ ಒತ್ತಾಯ ಕೂಡ ಕೇಳಿ ಬಂದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈಗಾಗಲೇ ಈ ಮಸೂದೆಯನ್ನು ಸೆ. 10 ರಂದು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್ ಅವರು ರಾಜ್ಯಸಭೆಯಲ್ಲಿ ಮಂಡಿಸಿದ್ದಾರೆ.

ಅಲ್ಲದೆ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತ ಹುದ್ದೆಯನ್ನು ಸಂಪುಟ ಕಾರ್ಯದರ್ಶಿಯ ಸ್ಥಾನಮಾನಕ್ಕೆ ಸೀಮಿತಗೊಳಿಸುವುದನ್ನು ವಿರೋಧಿಸಿ ಮಾಜಿ ಮುಖ್ಯ ಚುನಾವಣಾ ಆಯುಕ್ತರಾದ ಎನ್. ಗೋಪಾಲಸ್ವಾಮಿ, ವಿ.ಎಸ್‌ ಸಂಪತ್‌ ಹಾಗೂ ಎಸ್‌.ವೈ ಖುರೈಷಿ ಶನಿವಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಸದ್ಯ ಚುನಾವಣಾ ಆಯುಕ್ತರಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸ್ಥಾನಮಾನ ಇದೆ.

ಚುನಾವಣಾ ಆಯುಕ್ತರ ನೇಮಕ್ಕೆ ಮೂರು ಮಂದಿಯ ಸಮಿತಿಯನ್ನು ರಚಿಸಿ ಸುಪ್ರೀಂ ಕೋರ್ಟ್‌ ಮಾರ್ಚ್‌ನಲ್ಲಿ ತೀರ್ಪು ನೀಡಿತ್ತು. ಪ್ರಧಾನಮಂತ್ರಿ ನೇತೃತ್ವದ ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಸದಸ್ಯರಾಗಿರಲಿದ್ದಾರೆ..

ಆದರೆ ಈ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟು ಕೇಂದ್ರದ ಸಚಿವರನ್ನು ಸೇರಿಸಿಕೊಳ್ಳುವ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡನೆ ಮಾಡಿತ್ತು. ಇದಕ್ಕೆ ಕಾಂಗ್ರೆಸ್‌, ಎಎಪಿ, ತೃಣಮೂಲ ಕಾಂಗ್ರೆಸ್‌ ಸೇರಿ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.