ADVERTISEMENT

Birbhum Violence: ಸಜೀವ ದಹನಕ್ಕೂ ಮುನ್ನ ಮಾರಣಾಂತಿಕ ಹಲ್ಲೆ!

ಪಿಟಿಐ
Published 24 ಮಾರ್ಚ್ 2022, 10:02 IST
Last Updated 24 ಮಾರ್ಚ್ 2022, 10:02 IST
ಬಿರ್‌ಭೂಮ್ ಹಿಂಸಾಚಾರ
ಬಿರ್‌ಭೂಮ್ ಹಿಂಸಾಚಾರ   

ಕೋಲ್ಕತ್ತ: ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್ ಸಮೀಪದ ಬೋಗ್ತಿ ಗ್ರಾಮದಲ್ಲಿ ಎಂಟು ಜನರನ್ನು ಸಜೀವವಾಗಿ ದಹನ ಮಾಡಿದ ಕೃತ್ಯಕ್ಕೂ ಮುನ್ನ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು ಎಂದು ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದು ಬಂದಿದೆ.

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಘಟನೆಯಲ್ಲಿ ಮೂವರು ಮಹಿಳೆಯರು ಹಾಗೂಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಸಜೀವವಾಗಿ ದಹನ ಮಾಡಲಾಗಿತ್ತು.

ಮಂಗಳವಾರ ಮುಂಜಾನೆ ದುಷ್ಕರ್ಮಿಗಳು ಮನೆಗೆ ಬೆಂಕಿ ಹಚ್ಚಿದ್ದರು. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹವನ್ನು ವಿಧಿವಿಜ್ಞಾನ ತಜ್ಞರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಪ್ರಾಥಮಿಕ ವರದಿ ಪ್ರಕಾರ, ಮಾರಣಾಂತಿಕ ಹಲ್ಲೆ ನಡೆಸಿದ ಬಳಿಕ ಜೀವಂತವಾಗಿ ಸುಡಲಾಗಿದೆ ಎಂದು ರಾಮ್‌ಪುರಹಾಟ್ ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಕನಿಷ್ಠ 20 ಮಂದಿಯನ್ನು ಬಂಧಿಸಲಾಗಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸ್ಥಳೀಯ ನಾಯಕನ ಹತ್ಯೆಯ ಬಳಿಕ ಹಿಂಸಾಚಾರ ನಡೆದಿದೆ ಎಂದು ಶಂಕಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.