ಶಿಮ್ಲಾ: ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿರುವ ಪಾಂಗ್ ಡ್ಯಾಮ್ ನದಿಯ ಸುತ್ತ ಮುತ್ತ 1700ಕ್ಕೂ ಹೆಚ್ಚು ವಲಸೆಗಳು ಮೃತಪಟ್ಟಿರುವುದರಿಂದ ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಬ್ಬಾತು, ಗಾವಿಲಾ, ರೀವರ್ ಟೇಲ್ ಸೇರಿದಂತೆ ವಿವಿಧ ಪ್ರಬೇಧಕ್ಕೆ ಸೇರಿದ 1700ಕ್ಕೂ ಹೆಚ್ಚು ಪಕ್ಷಿಗಳು ಹಕ್ಕಿಜ್ವರದಿಂದ ಸಾವನ್ನಪ್ಪಿವೆ ಎಂಬುದು ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ ಎಂದುಕಾಂಗ್ರಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನದಿ ಪಾತ್ರದ ಸುಮಾರು 10 ಕಿ,ಮೀಟರ್ ವ್ಯಾಪ್ತಿಯಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಬಂದ್ ಮಾಡಲಾಗಿದೆ. ಹಾಗೇ ಕೋಳಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮೃತಪಕ್ಷಿಗಳ ರಕ್ತ ಹಾಗೂ ಮಾಂಸದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು ಇನ್ನಷ್ಟೆ ವರದಿ ಬರಬೇಕಿದೆ ಎಂದು ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.