ನವದೆಹಲಿ: ರಾಜಸ್ಥಾನದ ಕೋಟ ಸಂಸದ ಓಂ ಬಿರ್ಲಾ ಅವರು ಎನ್‌ಡಿಎ ಒಮ್ಮತದ ಅಭ್ಯರ್ಥಿಯಾಗಿ 18ನೇ ಲೋಕಸಭೆಯ ಸ್ಪೀಕರ್ ಹುದ್ದೆಗೆ ಎರಡನೇ ಬಾರಿಗೆ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಈ ಕುರಿತು ಜೆಡಿಯು ನಾಯಕ ಮತ್ತು ಕೇಂದ್ರ ಸಚಿವ ಲಾಲನ್ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿರ್ಲಾ ಅವರ ಹೆಸರನ್ನು ಎನ್‌ಡಿಎ ಸರ್ವಾನುಮತದಿಂದ ನಿರ್ಧರಿಸಿದೆ’ ಎಂದರು.
ಇದೇ ವೇಳೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಲಾಲನ್ ಸಿಂಗ್, ‘ಆಯ್ಕೆಯ ಸಮಯ ಬಂದಾಗ ಎಲ್ಲರೂ ಒಟ್ಟಾಗಿ ಕುಳಿತು ಚರ್ಚಿಸಬೇಕು ಎಂದು ರಾಜನಾಥ್ ಸಿಂಗ್ ವಿನಂತಿಸಿದ್ದರೂ ಸಹ. ಉಪಸಭಾಪತಿ ಹುದ್ದೆಯ ಕುರಿತು ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ’ ಎಂದರು.
ಇತ್ತ ’ಇಂಡಿಯಾ’ ಒಕ್ಕೂಟದಿಂದ ಸ್ಪೀಕರ್ ಸ್ಥಾನಕ್ಕೆ ಕೆ.ಸುರೇಶ್ ಅವರನ್ನು ಕಣಕ್ಕಿಳಿಸಲಾಗಿದೆ.
ನಾಳೆ (ಜೂನ್.26) ಲೋಕಸಭಾ ಸ್ಪೀಕರ್ ಆಯ್ಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.