ನವದೆಹಲಿ: ಅವಧಿಗಿಂತ ಮೊದಲೇ ಲೋಕಸಭಾ ಚುನಾವಣೆ ನಡೆದರೆ, ಅದರ ಜೊತೆಗೆಯೇ ಒಡಿಶಾ ವಿಧಾನಸಭೆ ಚುನಾವಣೆ ನಡೆಸಬೇಕು ಎಂದು ಬಿಜು ಜನತಾ ದಳ (ಬಿಜೆಡಿ) ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
ಏಕಕಾಲಕ್ಕೆ ಚುನಾವಣೆ ನಡೆದರೆ ₹1,000 ಕೋಟಿ ರಾಜ್ಯಕ್ಕೆ ಉಳಿತಾಯವಾಗಲಿದೆ ಎಂದು ಬಿಜೆಡಿ ಹೇಳಿದೆ.
2004ರಿಂದಲೂ ಲೋಕಸಭೆ ಮತ್ತು ಒಡಿಶಾ ವಿಧಾನಸಭೆಗೆ ಜತೆಯಾಗಿಯೇ ಚುನಾವಣೆ ನಡೆಯುತ್ತಿದೆ. ಹಾಗಾಗಿ ಈ ಬಾರಿಯೂ ಲೋಕಸಭೆ ಮತ್ತು ಒಡಿಶಾ ವಿಧಾನಸಭೆಯ ಅವಧಿ ಏಕಕಾಲಕ್ಕೆ ಪೂರ್ಣಗೊಳ್ಳಲಿದೆ.
ಈ ಬಾರಿ ಲೋಕಸಭಾ ಚುನಾವಣೆ ಅವಧಿಗಿಂತ ಮುನ್ನವೇ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಹಾಗಾದರೆ, ಲೋಕಸಭೆಯ ಜತೆಗೆ ವಿಧಾನಸಭೆಗೂ ಚುನಾವಣೆ ನಡೆಸಬೇಕು ಎಂದು ಆಯೋಗಕ್ಕೆ ಬಿಜೆಡಿ ಮನವಿ ಮಾಡಿದೆ.
ಬಿಜೆಡಿಯ ಹಿರಿಯ ಸಂಸದ ಪಿನಾಕಿ ಮಿಶ್ರಾ ನೇತೃತ್ವದಲ್ಲಿ ನಿಯೋಗವೊಂದು ಆಯೋಗದ ಮುಖ್ಯ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.