ನವದೆಹಲಿ: ಹರಿಯಾಣದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಬಿಜೆಪಿ ಸಂಸದೀಯ ಮಂಡಳಿಯು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ಕೇಂದ್ರದ ವೀಕ್ಷಕರನ್ನಾಗಿ ಭಾನುವಾರ ನೇಮಕ ಮಾಡಿದೆ.
ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿಯು ಬಹುಮತ ಪಡೆದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ವೀಕ್ಷಕರನ್ನಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಘ್ ಅವರನ್ನು ನೇಮಕ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.