ADVERTISEMENT

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ: ಉಸ್ತುವಾರಿಗಳ ನೇಮಿಸಿದ ಬಿಜೆಪಿ

ವರ್ಷಾಂತ್ಯದಲ್ಲಿ ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ವಿಧಾನಸಭೆಗೆ ಚುನಾವಣೆ

ಪಿಟಿಐ
Published 17 ಜೂನ್ 2024, 14:11 IST
Last Updated 17 ಜೂನ್ 2024, 14:11 IST
<div class="paragraphs"><p>ಜೆ. ಪಿ. ನಡ್ಡಾ </p></div>

ಜೆ. ಪಿ. ನಡ್ಡಾ

   

ನವದೆಹಲಿ: ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಲು ಮುಂದಾಗಿರುವ ಬಿಜೆಪಿ, ಈ ಸಂಬಂಧ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರನ್ನು ಮಹಾರಾಷ್ಟ್ರದ ಉಸ್ತುವಾರಿಯನ್ನಾಗಿ ನೇಮಿಸಲಾಗಿದ್ದು, ಮತ್ತೊಬ್ಬ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ADVERTISEMENT

ಹರಿಯಾಣದ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಯಾಗಿ ತ್ರಿಪುರಾದ ಮಾಜಿ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್‌ ಅವರನ್ನು ನೇಮಿಸಲಾಗಿದೆ.

ಕೇಂದ್ರ ಸಚಿವ ಶಿವರಾಜ್‌ಸಿಂಗ್ ಚೌಹಾಣ್ ಅವರನ್ನು ಜಾರ್ಖಂಡ್‌ನ ಉಸ್ತುವಾರಿಯಾಗಿ ನೇಮಿಸಿದ್ದರೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಸಹ ಉಸ್ತುವಾರಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದೆ.

ಈ ವರ್ಷಾಂತ್ಯದಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್‌ನ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಸುಪ್ರೀಂ ಕೋರ್ಟ್‌ ಸೂಚನೆಯಂತೆ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್‌ ಒಳಗೆ ಚುನಾವಣೆ ನಡೆಸುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.