ಲಖನೌ: 2018ರ ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗರ್ ಪತ್ನಿಯ ಚುನಾವಣಾ ಉಮೇದುವಾರಿಕೆಯನ್ನು ಬಿಜೆಪಿ ರದ್ದುಗೊಳಿಸಿದೆ.
ಜಿಲ್ಲಾ ಪಂಚಾಯತ್ ಚುನಾವಣೆಗೆ ಏಪ್ರಿಲ್ 9ರಂದು ಬಿಜೆಪಿ ಬಿಡುಗಡೆ ಮಾಡಿದ್ದ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೆಂಗರ್ ಪತ್ನಿ, ಸಂಗೀತಾ ಸೆಂಗರ್ ಹೆಸರಿತ್ತು.
ಸಂಗೀತಾ ಸೆಂಗರ್ ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಹೇಳಿರುವುದಾಗಿ ‘ಎಎನ್‌ಐ’ ಟ್ವೀಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.