ವಿಜಯವಾಡ: ಚುನಾವಣಾ ಮೈತ್ರಿ ಕುರಿತ ಅಂತಿಮ ನಿರ್ಧಾರವನ್ನು ಪಕ್ಷದ ಕೇಂದ್ರ ನಾಯಕರೇ ಕೈಗೊಳ್ಳುತ್ತಾರೆ ಎಂದು ಬಿಜೆಪಿಯ ಆಂಧ್ರಪ್ರದೇಶ ಘಟಕದ ಅಧ್ಯಕ್ಷೆ ದಗ್ಗುಬಾಟಿ ಪುರಂದೇಶ್ವರಿ ಅವರು ಭಾನುವಾರ ತಿಳಿಸಿದರು.
ಮುಂದಿನ ಚುನಾವಣೆಗಳಲ್ಲಿ ಟಿಡಿಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಎನ್‌ಡಿಎ ಮಿತ್ರ ಪಕ್ಷ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಘೋಷಿಸಿದ ಬೆನ್ನಲ್ಲೇ ಈ ಹೇಳಿಕೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಅಂಗವಾಗಿ ವಿಜಯವಾಡದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಿಜೆಪಿ ನಾಯಕರನ್ನು ಭೇಟಿಯಾಗಿ ತಮ್ಮ ನಿರ್ಧಾರದ ಕುರಿತು ವಿವರಿಸುವುದಾಗಿ ಪವನ್ ಕಲ್ಯಾಣ್ ತಿಳಿಸಿದ್ದಾರೆ. ಬಳಿಕ ಪಕ್ಷದ ನಾಯಕರು ನಮ್ಮೊಂದಿಗೂ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಅವರು ಹೇಳಿದರು.
ಟಿಡಿಪಿಯೊಂದಿಗೆ ಮೈತ್ರಿ ಇಲ್ಲವೆಂದು ಸ್ಥಳೀಯ ಬಿಜೆಪಿ ನಾಯಕರು ಹಲವು ಬಾರಿ ಹೇಳಿಕೊಂಡಿದ್ದರು. ಆದರೆ ಮಿತ್ರ ಪಕ್ಷ ಜನಸೇನಾ ಮುಂದಿನ ಚುನಾವಣೆಗಳಲ್ಲಿ ಟಿಡಿಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಈಗಾಗಲೇ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.