ಟೀಕಮ್‌ಗಢ: ಮಧ್ಯಪ್ರದೇಶದ ಟೀಕಮ್‌ಗಢದಲ್ಲಿ ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ಚುನಾವಣಾ ಚರ್ಚೆಯ ವೇಳೆ ಇಬ್ಬರು ವ್ಯಕ್ತಿಗಳು ಸ್ಥಳೀಯ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ನಜರ್‌ಬಾಗ್‌ನಲ್ಲಿ ವಾಹಿನಿಯು ಶನಿವಾರ ರಾತ್ರಿ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದ ವೇಳೆ ನಡೆದ ಘಟನೆಯ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ.
‘ಚರ್ಚೆಯಲ್ಲಿ ಕಾಂಗ್ರೆಸ್, ಬಿಜೆಪಿ ಜತೆಗೆ ಇತರೆ ಪಕ್ಷಗಳ ಮುಖಂಡರೂ ಭಾಗವಹಿಸಿದ್ದರು. ಆರೋಪಿಗಳಾದ ಹಿಮಾಂಶು ತಿವಾರಿ ಮತ್ತು ಬಾಬರ್ ಅವರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಲ್ಲದೇ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದರು. ಅದಕ್ಕೆ ಬಿಜೆಪಿ ಮಾಧ್ಯಮ ಉಸ್ತುವಾರಿ ಪ್ರಫುಲ್ ದ್ವಿವೇದಿ ಆಕ್ಷೇಪ ವ್ಯಕ್ತಪಡಿಸಿದರು. ಆಗ ಅವರು ದ್ವಿವೇದಿ ಕಡೆಗೆ ಕುರ್ಚಿ ಎಸೆದರು’ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿ ಆನಂದ್ ರಾಜ್ ತಿಳಿಸಿದರು.
ದ್ವಿವೇದಿ ಕೊಟ್ಟ ದೂರಿನ ಆಧಾರದ ಮೇಲೆ ಬಾಬರ್ ಅವರನ್ನು ಬಂಧಿಸಲಾಗಿದ್ದು, ತಿವಾರಿ ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ನವೀನ್ ಸಾಹು ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದು, ಆರೋಪಿಗಳಿಗೂ ಪಕ್ಷಕ್ಕೂ ಸಂಬಂಧವಿಲ್ಲ. ಅವರು ಪ್ರೇಕ್ಷಕರಾಗಿ ಚರ್ಚೆಯಲ್ಲಿ ಪಾಲ್ಗೊಂಡಿದ್ದರು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.