ADVERTISEMENT

ಪಶ್ಚಿಮ ಬಂಗಾಳ | ಪಕ್ಷದ ಕಚೇರಿಯಲ್ಲೇ ಬಿಜೆಪಿ ನಾಯಕನ ಹತ್ಯೆ: ಮಹಿಳೆ ಬಂಧನ

ಪಿಟಿಐ
Published 10 ನವೆಂಬರ್ 2024, 5:16 IST
Last Updated 10 ನವೆಂಬರ್ 2024, 5:16 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಕೋಲ್ಕತ್ತ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಮೃತ ವ್ಯಕ್ತಿಯನ್ನು ಪೃಥ್ವಿರಾಜ್ ನಸ್ಕರ್ ಎಂದು ಗುರುತಿಸಲಾಗಿದೆ. ಈತ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣ ಖಾತೆಯನ್ನು ನಿರ್ವಹಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನವೆಂಬರ್ 5ರಂದು ನಸ್ಕರ್ ನಾಪತ್ತೆಯಾಗಿರುವ ಬಗ್ಗೆ ಕುಟುಂಬಸ್ಥರು ದೂರು ದಾಖಲಿಸಿದ್ದರು. ಶನಿವಾರ ರಾತ್ರಿ ಪಕ್ಷದ ಕಚೇರಿಯಲ್ಲಿ ನಸ್ಕರ್ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಹತ್ಯೆಗೆ ವೈಯಕ್ತಿಕ ದ್ವೇಷ ಕಾರಣವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ನಸ್ಕರ್‌ಗೆ ಹರಿತವಾದ ಆಯುಧಗಳಿಂದ ಹೊಡೆದು ಹತ್ಯೆ ಮಾಡಿರುವುದಾಗಿ ಬಂಧಿತ ಮಹಿಳೆ ತಪ್ಪೊಪ್ಪಿಕೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಮ್ಮ ಪಕ್ಷದ ಬೆಂಬಲಿಗರನ್ನು ಹೆದರಿಸುವ ಸಲುವಾಗಿ ಸ್ಥಳೀಯ ಟಿಎಂಸಿ ಕಾರ್ಯಕರ್ತರೇ ನಸ್ಕರ್‌ನನ್ನು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್‌ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.