ADVERTISEMENT

Assembly Election Result: ಗೆಲುವಿನ ಶ್ರೇಯ ಪ್ರಧಾನಿ ಮೋದಿಗೆ; BJP ನಾಯಕರ ಹರ್ಷ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಡಿಸೆಂಬರ್ 2023, 9:58 IST
Last Updated 3 ಡಿಸೆಂಬರ್ 2023, 9:58 IST
<div class="paragraphs"><p>ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ ಭಾರಿಸಿದ ನಂತರ ಕಾರ್ಯಕರ್ತರ ಸಂಭ್ರಮಾಚರಣೆ</p></div>

ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ ಭಾರಿಸಿದ ನಂತರ ಕಾರ್ಯಕರ್ತರ ಸಂಭ್ರಮಾಚರಣೆ

   

ನವದೆಹಲಿ: ಐದು ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ಭಾನುವಾರ ನಡೆದ ನಾಲ್ಕು ರಾಜ್ಯಗಳ ಮತ ಎಣಿಕೆಯಲ್ಲಿ ಮೂರರಲ್ಲಿ ಬಿಜೆಪಿಗೆ ಅಧಿಕಾರ ನಿಚ್ಚಳವಾಗಿದೆ. ದೇಶದಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ. ಇದೇ ಸಂದರ್ಭದಲ್ಲಿ ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ಮೋದಿ ಅವರಲ್ಲಿ ಜನರು ಇಟ್ಟಿರುವ ನಂಬಿಕೆಗೆ ಸಾಕ್ಷಿ

ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಜನರು ಇಟ್ಟಿರುವ ನಂಬಿಕೆಯೇ ಈ ಗೆಲುವಿಗೆ ಸಾಕ್ಷಿ. ಜನರು ರಾಜ್ಯದಲ್ಲಿ ಡಬ್ಬಲ್ ಎಂಜಿನ್ ಸರ್ಕಾರ ಇರಬೇಕು ಎಂದು ಬಯಸಿದ್ದರ ಪರಿಣಾಮ ಮಧ್ಯಪ್ರದೇಶದಲ್ಲಿ ಈ ಗೆಲುವು ಸಾಧ್ಯವಾಗಿದೆ. 

ADVERTISEMENT

– ಅನುರಾಗ್ ಸಿಂಗ್ ಠಾಕೂರ್, ಕೇಂದ್ರ ಸಚಿವ

ಮೋದಿ ಮ್ಯಾಜಿಕ್‌ನ ಪರಿಣಾಮ

ಬಿಜೆಪಿ ಪರ ಫಲಿತಾಂಶ ಬಂದ ಎಲ್ಲಾ ರಾಜ್ಯಗಳ ಜನರಿಗೆ ಧನ್ಯವಾದಗಳು. ಮೋದಿ ಅವರ ಮ್ಯಾಜಿಕ್ ಎಲ್ಲಾ ರಾಜ್ಯಗಳಲ್ಲೂ ವಿರೋಧ ಪಕ್ಷಗಳನ್ನು ಮಕಾಡೆ ಮಲಗಿಸಿದೆ. 

– ಸ್ಮೃತಿ ಇರಾನಿ, ಕೇಂದ್ರ ಸಚಿವೆ

ರಾಜಕೀಯ ಸಂಸ್ಕೃತಿ ಬದಲಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯದ ಸಂಸ್ಕೃತಿಯನ್ನೇ ಬದಲಿಸಿದ್ದಾರೆ. ಅದು ಈ ಬಾರಿ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ.

– ಮುಖ್ತರ್ ಅಬ್ಬಾಸ್ ನಖ್ವಿ, ಬಿಜೆಪಿ ಮುಖಂಡ

ಮೋದಿ, ಮತದಾರರಿಗೆ ಧನ್ಯವಾದಗಳು

ರಾಜಸ್ಥಾನದಲ್ಲಿ ಪಕ್ಷದ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಪಕ್ಷ ಏನು ಹೇಳುತ್ತದೋ ಹಾಗೇ ನಡೆದುಕೊಳ್ಳುತ್ತದೆ ಎಂಬ ಮಾತಿನಲ್ಲಿ ನಂಬಿಕೆ ಇಟ್ಟಿರುವ ಮತದಾರರಿಂದ ಈಗ ಗೆಲುವು ಸಾಧ್ಯವಾಗಿದೆ.

– ರಾಜವರ್ಧನ್ ರಾಥೋಡ್, ಜೋತ್ವಾರಾ ಬಿಜೆಪಿ ಅಭ್ಯರ್ಥಿ

ಮತದಾರರು ಮೋದಿ, ಬಿಜೆಪಿ ಪರ ಇದ್ದಾರೆ

ಪಂಚ ರಾಜ್ಯಗಳ ಚುನಾವಣೆಯಲ್ಲಿ ಮತದಾರರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯೊಂದಿಗಿದ್ದಾರೆ ಎಂಬುದು ಖಾತ್ರಿಯಾಗಿದೆ. ರಾಜಸ್ಥಾನ ಹಾಗೂ ಛತ್ತೀಸಗಢದಲ್ಲೂ ಪಕ್ಷ ಸ್ಪಷ್ಟ ಬಹುಮತ ಪಡೆದಿದೆ.

– ಬಸವರಾಜ ಬೊಮ್ಮಾಯಿ, ಬಿಜೆಪಿ ಮುಖಂಡ

ಮೋದಿ ಮೇಲೆ ಜನರು ಇಟ್ಟಿರುವ ನಂಬಿಕೆ

ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಮೇಲೆ ಭಾರತದ ಜನರು ನಂಬಿಕೆ ಇಟ್ಟಿದ್ದಾರೆ ಎಂಬುದಕ್ಕೆ ಈ ಚುನಾವಣಾ ಫಲಿತಾಂಶವೇ ಸಾಕ್ಷಿ. ಮೋದಿ ಅವರ ಕಾರ್ಯಕ್ರಮಗಳು, ಮಾತು ಹಾಗೂ ಗ್ಯಾರೆಂಟಿಗಳ ಮೇಲೆ ಜನರ ವಿಶ್ವಾಸ ಮುಂದುವರಿದಿದೆ.

– ಪೀಯೂಷ್ ಗೋಯಲ್, ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.