ADVERTISEMENT

ಅಬಕಾರಿ ಹಗರಣ: ಸಿ.ಎಂ ಕೇಜ್ರಿವಾಲ್‌ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಪಿಟಿಐ
Published 4 ಅಕ್ಟೋಬರ್ 2023, 15:41 IST
Last Updated 4 ಅಕ್ಟೋಬರ್ 2023, 15:41 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬುಧವಾರ ಎಎಪಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಿದರು. – ಪಿಟಿಐ ಚಿತ್ರ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬುಧವಾರ ಎಎಪಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಿದರು. – ಪಿಟಿಐ ಚಿತ್ರ   

ನವದೆಹಲಿ: ಅಬಕಾರಿ ನೀತಿ ಹಗರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಗೆ ಒತ್ತಾಯಿಸಿ, ದೆಹಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬುಧವಾರ ಎಎಪಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.

ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದ ಬೆನ್ನಲ್ಲೇ ಬಿಜೆಪಿ ಪ್ರತಿಭಟನೆ ಮಾಡಿದೆ. ಪ್ರತಿಭಟನಕಾರರು ಐಟಿಒದಿಂದ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯತ್ತ ಮೆರವಣಿಗೆ ಹೊರಟಾಗ, ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಅವರನ್ನು ತಡೆದರು.

ಸಿಂಗ್ ಅವರ ನಿವಾಸದ ಮೇಲೆ ನಡೆದ ಇ.ಡಿ ದಾಳಿಯು ರಾಷ್ಟ್ರ ರಾಜಧಾನಿಯಲ್ಲಿ ಎಎಪಿ ಸರ್ಕಾರದ ಭ್ರಷ್ಟಾಚಾರವನ್ನು ಜಗಜ್ಜಾಹೀರುಗೊಳಿಸಿದೆ ಎಂದು ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಆರೋಪಿಸಿದರು.

ADVERTISEMENT

ಈ ಹಗರಣದಲ್ಲಿ ಭಾಗಿಯಾದವರೆಲ್ಲರೂ ಶೀಘ್ರವೇ ಕಂಬಿ ಹಿಂದೆ ಇರಲಿದ್ದಾರೆ ಎಂದೂ ಸಚ್‌ದೇವ ಹೇಳಿದರು.

ಕಳೆದ ವರ್ಷ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು, ಅಬಕಾರಿ ನೀತಿ ಅನುಷ್ಠಾನದಲ್ಲಿನ ಅವ್ಯವಹಾರಗಳ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ ದೆಹಲಿ ಸರ್ಕಾರವು 2021-22ರ ತನ್ನ ಅಬಕಾರಿ ನೀತಿ ರದ್ದುಪಡಿಸಿತು. ಆಗ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಇಲಾಖೆ ಸಚಿವರೂ ಆಗಿದ್ದ ಮನೀಶ್ ಸಿಸೋಡಿಯಾ ಅವರು ಈ ಹಗರಣದಲ್ಲಿ ಬಂಧಿತರಾಗಿದ್ದು, ಸದ್ಯ ಜೈಲಿನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.