ನವದೆಹಲಿ: ಪಂಜಾಬ್ ಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿ ಮೈತ್ರಿಕೂಟ ಸಿಖ್ ಸಮುದಾಯದ ಅಭ್ಯರ್ಥಿಗಳಿಗೆ ಹೆಚ್ಚಿನ ಸ್ಥಾನ ಮೀಸಲಿಡಲು ಮುಂದಾಗಿದೆ.
117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಫೆಬ್ರುವರಿ 20ರಂದು ಮತದಾನ ನಡೆಯಲಿದೆ.
ಈ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಪಂಜಾಬ್ ಲೋಕ್ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ (ಸಂಯುಕ್ತ) ಮೈತ್ರಿಕೂಟ 70ಕ್ಕೂ ಅಧಿಕ ಸ್ಥಾನಗಳಲ್ಲಿ ಸಿಖ್ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
ಅದರಲ್ಲೂ ರೈತರು ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲು ಬಿಜೆಪಿ ನಿರ್ಧರಿಸಿದೆ.
ಮೂಲಗಳ ಪ್ರಕಾರ, 117 ಸ್ಥಾನಗಳ ಪೈಕಿ, ಬಿಜೆಪಿ 65, ಪಂಜಾಬ್ ಲೋಕ್ ಕಾಂಗ್ರೆಸ್ 38 ಮತ್ತು ಶಿರೋಮಣಿ ಅಕಾಲಿ ದಳ (ಸಂಯುಕ್ತ) 14 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಅಲ್ಲದೆ, ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಗೂ ಬಿಜೆಪಿ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಬಿಜೆಪಿ ಪಂಜಾಬ್ ಕಾರ್ಯದರ್ಶಿ ತರುಣ್ ಚುಘ್ ಹೇಳಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.