ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಬಹುದಿತ್ತು. ಆದರೆ, ಕೋವಿಡ್ ಎರಡನೇ ಅಲೆ ಬಂದಿದ್ದರಿಂದ ಸಮಸ್ಯೆಯಾಯಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.
ಕೋವಿಡ್ ಎರಡನೇ ಅಲೆಯ ಸಂದರ್ಭ ಲಾಕ್‌ಡೌನ್ ಮತ್ತು ನಿರ್ಬಂಧಗಳನ್ನು ಹೇರಲಾಗಿತ್ತು. ಇದರಿಂದಾಗಿ ಚುನಾವಣಾ ಪ್ರಚಾರ ಕಾರ್ಯವನ್ನು ಸರಿಯಾಗಿ ನಡೆಸಲು ಸಾಧ್ಯವಾಗಿಲ್ಲ ಎಂದು ನಡ್ಡಾ ತಿಳಿಸಿದ್ದಾರೆ.
ಕಳೆದ ವರ್ಷ ಎಂಟು ಹಂತಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು.
ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿರುವ ನಡ್ಡಾ, ಬಿಜೆಪಿ ತನ್ನ ಪ್ರಯತ್ನ ನಿಲ್ಲಿಸುವುದಿಲ್ಲ. ಮುಂದೊಂದು ದಿನ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ, ಬಂಗಾಳದಲ್ಲಿ ಅಧಿಕಾರ ಹಿಡಿಯುವುದು ಖಚಿತ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.