ಪಿಟಿಐ
ಜಲಗಾಂವ್: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ಪ್ರಚಾರ ಮಾಡಿದ್ದ 10–12 ಕ್ಷೇತ್ರಗಳಲ್ಲಿ ಬಿಜೆಪಿ ಸೋಲನುಭವಿಸಿದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದರು.
ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಚುನಾವಣಾ ರ್ಯಾಲಿಗಳಲ್ಲಿ ಪಾಲ್ಗೊಳ್ಳುವುದು ಪ್ರಧಾನಿಯ ಹಕ್ಕು. ಅದಕ್ಕೆ ಹೆಚ್ಚಿನ ಗಮನ ನೀಡುವ ಅಗತ್ಯ ಇಲ್ಲ. ಆದರೆ, ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 16 ರ್ಯಾಲಿಗಳಲ್ಲಿ ಪಾಲ್ಗೊಂಡಿದ್ದರು. ಅವರು ರ್ಯಾಲಿ ನಡೆಸಿದ 10–12 ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ’ ಎಂದು ಹೇಳಿದರು.
ಬಿಜೆಪಿ ನಾಯಕ ರಾವ್ಸಾಹೇಬ್ ದನ್ವೆ ಅವರು ಬೆಂಬಲಿಗರಿಗೆ ಒದ್ದ ವಿಡಿಯೊ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಪಕ್ಷವು ತನ್ನ ಕಾರ್ಯಕರ್ತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದು ಉದಾಹರಣೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.