ADVERTISEMENT

ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಜೂನ್ 2024, 5:33 IST
Last Updated 24 ಜೂನ್ 2024, 5:33 IST
<div class="paragraphs"><p>ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ</p></div>

ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

   

(ಚಿತ್ರ: ಎಎನ್‌ಐ ಸ್ಕ್ರೀನ್‌ಗ್ರ್ಯಾಬ್)

ನವದೆಹಲಿ: 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ADVERTISEMENT

ಕಾಂಗ್ರೆಸ್‌ನ ಹಿರಿಯ ಸದಸ್ಯ ಕೆ. ಸುರೇಶ್‌ ಅವರನ್ನು ಬಿಟ್ಟು ಮಹತಾಬ್‌ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಿರುವ ಬಗ್ಗೆ ವಿರೋಧ ಪಕ್ಷಗಳು ಅಸಮಾಧಾನ ಹೊರಹಾಕಿದ್ದು, ಈ ವಿವಾದ ಅಧಿವೇಶನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ.

ಅಗಲಿದ ಗಣ್ಯರ ಗೌರವಾರ್ಥ ಮೌನ ಆಚರಿಸುವುದರ ಮೂಲಕ ಕಲಾಪ ಆರಂಭವಾಗಲಿದೆ. ಮೊದಲಿಗೆ ಲೋಕಸಭೆಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಮಹತಾಬ್ ಅವರು ಕರೆ ನೀಡಲಿದ್ದಾರೆ. ಆ ನಂತರ ಎರಡು ದಿನಗಳವರೆಗೆ ಉಳಿದ ಸದಸ್ಯರ ಪ್ರಮಾಣವಚನ ಪ್ರಕ್ರಿಯೆ ನಡೆಯಲಿದೆ.

ಜೂನ್‌ 26ರಂದು ಲೋಕಸಭಾ ಸ್ಪೀಕರ್‌ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.