ADVERTISEMENT

ಮ‌ಹುವಾ ವಿರುದ್ಧ ಸಿಬಿಐ ತನಿಖೆಗೆ ಲೋಕಪಾಲ್ ಆದೇಶ: ದುಬೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2023, 16:21 IST
Last Updated 8 ನವೆಂಬರ್ 2023, 16:21 IST
<div class="paragraphs"><p>ಮಹುವಾ ಮೊಯಿತ್ರಾ</p></div>

ಮಹುವಾ ಮೊಯಿತ್ರಾ

   

ನವದಹೆಲಿ: ಭ್ರಷ್ಟಾಚಾರದ ದೂರಿನ ಮೇರೆಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆಗೆ ಲೋಕಪಾಲ್‌ ಆದೇಶಿಸಿದೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ ಹೇಳಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಮೊಯಿತ್ರಾ, ಅದಾನಿ ಸಮೂಹದ ಕಲ್ಲಿದ್ದಲು ಹಗರಣ ಆರೋಪದ ಬಗ್ಗೆ ತನಿಖೆ ನಡೆಸಲು ಸಿಬಿಐ ಮೊದಲು ಎಫ್ಐಆರ್ ದಾಖಲಿಸಬೇಕು ಎಂದು ಹೇಳಿದ್ದಾರೆ.

ADVERTISEMENT

‘ನನ್ನ ದೂರಿನ ಮೇರೆಗೆ ಲೋಕಪಾಲ್ ಇಂದು ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದೆ’ ಎಂದು ದುಬೆ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ಆದರೆ, ಈ ಬಗ್ಗೆ ಲೋಕಪಾಲರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.

ಉದ್ಯಮಿ ದರ್ಶನ್ ಹೀರಾನಂದಾನಿ ಅವರ ಆಜ್ಞೆಯ ಮೇರೆಗೆ ಲಂಚಕ್ಕೆ ಪ್ರತಿಯಾಗಿ ಮೊಯಿತ್ರಾ ಅವರು ಲೋಕಸಭೆಯಲ್ಲಿ ಅದಾನಿ ಗ್ರೂಪ್‌  ಮತ್ತು ನರೇಂದ್ರ ಮೋದಿ ಅವರನ್ನು ‌ಗುರಿಯಾಗಿಸಿಕೊಂಡು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ದುಬೆ ಆರೋಪಿಸಿದ ಕೆಲ ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಈ ವಿಷಯವನ್ನು ಸಂಸತ್‌ನ ನೀತಿ–ನಿಯಮಗಳ ಸಮಿತಿ ಪರಿಶೀಲಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.