ADVERTISEMENT

ಕಾಂಗ್ರೆಸ್‌ನಂತೆ ಬಿಜೆಪಿಯು ತನಿಖಾ ಸಂಸ್ಥೆಗಳನ್ನು ರಾಜಕೀಯಗೊಳಿಸುತ್ತಿದೆ: ಮಾಯಾವತಿ

ಪಿಟಿಐ
Published 28 ಏಪ್ರಿಲ್ 2024, 15:01 IST
Last Updated 28 ಏಪ್ರಿಲ್ 2024, 15:01 IST
<div class="paragraphs"><p>ಮಾಯಾವತಿ ( ಸಂಗ್ರಹ ಚಿತ್ರ)</p></div>

ಮಾಯಾವತಿ ( ಸಂಗ್ರಹ ಚಿತ್ರ)

   

ಮೊರೆನಾ( ಮಧ್ಯಪ್ರದೇಶ): ಕಾಂಗ್ರೆಸ್‌ನಂತೆಯೇ ಬಿಜೆಪಿಯು ತನಿಖಾ ಸಂಸ್ಥೆಗಳನ್ನು ರಾಜಕೀಯಗೊಳಿಸುತ್ತಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕಿ ಮಾಯಾವತಿ ಭಾನುವಾರ ಆರೋಪಿಸಿದ್ದಾರೆ.

ಚುನಾವಣಾ ರ್‍ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಪಕ್ಷದಂತೆಯೇ ಇದೀಗ ಕೇಂದ್ರ ಬಿಜೆಪಿ ಸರ್ಕಾರವು ತನಿಖಾ ಸಂಸ್ಥೆಗಳನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ. ದೇಶದಲ್ಲಿ ಕಳೆದ ಎರಡು ವರ್ಷಗಳಲ್ಲಿ ಬಡತನ ಮತ್ತು ನಿರುದ್ಯೋಗ ಸಮಸ್ಯೆಗಳು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ದೇಶದಲ್ಲಿ ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆಗಳು ನಡೆದರೆ ಹಾಗೂ ಇವಿಎಂಗಳನ್ನು ಅಕ್ರಮ ಎಸಗಲು (ಟ್ಯಾಂಪರಿಂಗ್) ಬಳಸದಿದ್ದರೆ ದೇಶದಲ್ಲಿ ಬಿಜೆಪಿ ಗೆಲ್ಲುವು ಸುಲಭವಲ್ಲ ಎಂದು ಹೇಳಿದ್ದಾರೆ.

ದೇಶದ ಗಡಿಗಳ ಭದ್ರತೆ, ಬಡತನ ಮತ್ತು ಭ್ರಷ್ಟಚಾರ ನಿರ್ಮೂಲನೆ, ಉದ್ಯೋಗ ಸೃಷ್ಟಿ ಯಾವುದೇ ವಿಚಾರಗಳಲ್ಲಿ ನೀಡಿದ ಭರವಸೆಗಳನ್ನು ಬಿಜೆಪಿ ಈಡೇರಿಸಲಿಲ್ಲ ಎಂದು ಮಾಯಾವತಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ದಲಿತರು, ಆದಿವಾಸಿಗಳು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಕೆಲಸ ಮಾಡದ ಕಾರಣ ನಮ್ಮ ಪಕ್ಷವನ್ನು ಸ್ಥಾಪಿಸಲಾಯಿತು ಎಂದಿದ್ದಾರೆ.

ಕಾಂಗ್ರೆಸ್‌ ಜಾತಿವಾದಿ, ಕೋಮುವಾದಿ, ಬಂಡವಾಳಶಾಹಿ ಮನಸ್ಥಿತಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.