ನವದೆಹಲಿ: ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಎಎಪಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವಿರುದ್ಧ ಗುರುವಾರ ಪ್ರತಿಭಟನೆ ನಡೆಸಿದ್ದಾರೆ.
ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿಯಾಗಿದ್ದಾಗ ಅಧಿಕೃತ ಬಂಗಲೆಯನ್ನು ನವೀಕರಿಸಲು ದುಬಾರಿ ಬೆಲೆಯ ಗೃಹೋಪಯೋಗಿ ವಸ್ತುಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ತೊಡಗಿದ್ದ ಕೆಲ ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಯಾರಿಗೂ ಅವಕಾಶವಿಲ್ಲ’ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ತೊಡಗಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚದೇವ ಅವರನ್ನು ಬಂಧಿಸಲಾಗಿದೆ ಎಂದು ಬಿಜೆಪಿ ಮೂಲಗಳು ಆರೋಪಿಸಿವೆ.
ವಿರೋಧ ಪಕ್ಷದ ವಿಜೇಂದ್ರ ಗುಪ್ತಾ ಮತ್ತು ಬಿಜೆಪಿ ಶಾಸಕರು ಫಿರೋಜ್ ಶಾ ರಸ್ತೆಯಲ್ಲಿರುವ ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಎಎಪಿ ತೊರೆದು ಬಿಜೆಪಿ ಸೇರಿದ್ದ ಕೈಲಾಶ್ ಗಹಲೋತ್ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.