ADVERTISEMENT

ಪಶ್ಚಿಮ ಬಂಗಾಳ: ಪಂಚಾಯತ್ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆಗೊಳಿಸಿದ ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜೂನ್ 2023, 10:31 IST
Last Updated 27 ಜೂನ್ 2023, 10:31 IST
ಪ್ರಣಾಳಿಕೆ ಬಿಡುಗಡೆಗೊಳಿಸಿದ ಬಿಜೆಪಿ
ಪ್ರಣಾಳಿಕೆ ಬಿಡುಗಡೆಗೊಳಿಸಿದ ಬಿಜೆಪಿ   

ಕೋಲ್ಕತ್ತ : ಪಂಚಾಯತ್ ಚುನಾವಣೆ ಹಿನ್ನೆಲೆ ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಘಟಕ ಪಕ್ಷದ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಜುಲೈ 8ರಂದು ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದ್ದು, ಜುಲೈ 11ರಂದು ಮತ ಎಣಿಕೆ ನಡೆಯಲಿದೆ.

ಪ್ರಣಾಳಿಕೆಯನ್ನು ಸಾಲ್ಟ್‌ ಲೇಕ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು. ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್, ಪಕ್ಷದ ಹಿರಿಯ ಮುಖಂಡರಾದ ಸುವೇಂದು ಅಧಿಕಾರಿ, ದಿಲೀಪ್ ಘೋಷ್, ಅಗ್ನಿಮಿತ್ರ ಪಾಲ್ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.

ADVERTISEMENT

ರಾಜ್ಯದ 20 ಜಿಲ್ಲೆಗಳಲ್ಲಿ ಮೂರು ಹಂತಗಳ ಪಂಚಾಯ್ತಿಗಳಿಗೆ ಹಾಗೂ ಡಾರ್ಜಲಿಂಗ್ ಮತ್ತು ಕಾಲಿಂಪಾಂಗ್ ಜಿಲ್ಲೆಗಳಲ್ಲಿ ಎರಡು ಹಂತಗಳ ಪಂಚಾಯ್ತಿಗೆ ಒಂದೇ ದಿನ ಚುನಾವಣೆ ನಡೆಯಲಿದೆ.

ಈಗಾಗಲೇ ತೃಣ ಮೂಲ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಚುನಾವಣೆಗೆ ಬಿರುಸಿನ ಪ್ರಚಾರ ಕೈಗೊಂಡಿವೆ. ಪ್ರಚಾರದ ವೇಳೆ ಎರಡು ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪಗಳು ಸಾಮಾನ್ಯವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.