ಮುಂಬೈ: ಮೈತ್ರಿ ಪಕ್ಷ ಸಹಕಾರ ನೀಡದ ಹಿನ್ನೆಲೆಯಲ್ಲಿ ನಾವು ಸರ್ಕಾರ ರಚಿಸುವುದಿಲ್ಲ ಎಂದುಮಹಾರಾಷ್ಟ್ರ ಬಿಜೆಪಿ ಭಾನುವಾರ ತಿಳಿಸಿದೆ.
ಸಂಜೆ ರಾಜ್ಯಪಾಲಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗಸರ್ಕಾರ ರಚನೆಗೆ ನಮ್ಮ ಬಳಿ ಸಂಖ್ಯಾ ಬಲವಿಲ್ಲದ ಕಾರಣಸರ್ಕಾರ ರಚಿಸುವ ಪ್ರಯತ್ನ ಮಾಡುವುದಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಲಾಗಿದೆ ಎಂದು ಬಿಜೆಪಿ ಹೇಳಿದೆ.
ಸರ್ಕಾರ ರಚನೆ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯಪಾಲರು ಹಂಗಾಮಿ ಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡಣವೀಸ್ ಅವರಿಗೆ ಶನಿವಾರ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು.
ಸರ್ಕಾರ ರಚಿಸಲು ನಮ್ಮ ಮೈತ್ರಿ ಪಕ್ಷ ಅಗತ್ಯ ಬೆಂಬಲ ನೀಡದ ಹಿನ್ನೆಲೆಯಲ್ಲಿ ನಾವು ಸರ್ಕಾರ ರಚನೆ ಮಾಡುವ ಪ್ರಯತ್ನ ಮಾಡುವುದಿಲ್ಲ ಎಂದುಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ತಿಳಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಅವರುಕಾಂಗ್ರೆಸ್ ಮತ್ತು ಎನ್‌ಸಿಪಿ ಬೆಂಬಲದೊಂದಿಗೆ ಸರ್ಕಾರ ರಚಿಸಲು ಶಿವಸೇನೆ ಪ್ರಯತ್ನ ಮಾಡುತ್ತಿದೆ ಅವರಿಗೆ ಶುಭವಾಗಲಿ ಎಂದುಹೇಳಿದ್ದಾರೆ.
ಶಿವಸೇನಾ ಮತ್ತು ಎನ್‌ಸಿಪಿ ಸರ್ಕಾರ ರಚನೆ ಮಾಡಲಿದ್ದು ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಲಿದೆ ಎಂಬ ಮಾತುಗಳು ಮಹಾರಾಷ್ಟ್ರದ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ. ಈ ಬೆಳವಣಿಗೆಗಳ ಮಧ್ಯೆಚಂದ್ರಕಾಂತ್ ಪಾಟೀಲ್ ಅವರು ಶಿವಸೇನಾಗೆ ಶುಭಕೋರಿರುವುದು ಮೈತ್ರಿ ಮರಿಯುವುದರ ಸೂಚಕ ಎಂದೇ ಹೇಳಲಾಗುತ್ತಿದೆ ಎಂದು ಲೋಕಮಾತ ಪತ್ರಿಕೆ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.